ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಬ್ಯಾಟರ್ ಮತ್ತು ಕನ್ನಡತಿ ವೇದಾ ಕೃಷ್ಣಮೂರ್ತಿ ಅವರು ಬ್ಯಾಟರ್ ಅರ್ಜುನ್ ಹೊಯ್ಸಳ ಅವರೊಂದಿಗೆ ನಿಶ್ಚಿತಾರ್ಥವನ್ನು ಘೋಷಿಸುತ್ತಿದ್ದಂತೆ ಭಾನುವಾರ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸಿದರು.
ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು. ಆದರೆ ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗುತ್ತಿದ್ದು, ಶೀಘ್ರದಲ್ಲೇ ಸಪ್ತಪದಿ ತುಳಿಯಲ್ಲಿದ್ದಾರೆ. ಇದನ್ನು ಸ್ವತಃ ವೇದಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ.
ಅರ್ಜುನ್ ಹೊಯ್ಸಳ ಅವರು ವೇದಾ ಕೃಷ್ಣಮೂರ್ತಿ ಅವರೊಂದಿಗಿನ ಚಿತ್ರವನ್ನು Instagram ಪೋಸ್ಟ್ ಮಾಡಿದ್ದಾರೆ. ಲಡಾಖ್‌ನ ಸುಂದರವಾದ ಸ್ಥಳದ ಹಿನ್ನೆಲೆಯಲ್ಲಿ, ಅರ್ಜುನ್ ಅವರು ವೇದಾಗೆ ಪ್ರಪೋಸ್ ಮಾಡುತ್ತಿರುವುದು .
‘ಅವಳು ಒಪ್ಪಿಗೆಯ ಮುದ್ರೆ ಒತ್ತಿದಳು’ ಎಂದು ಅರ್ಜುನ್ ಚಿತ್ರಕ್ಕೆ ಶೀರ್ಷಿಕೆ ನೀಡಿದ್ದಾರೆ. ಅಭಿಮಾನಿಗಳು ಮತ್ತು ಸಹ ಆಟಗಾರರು ಈ ಪ್ರೇಮಿಗಳ ಕಡೆಗೆ ತಮ್ಮ ಅಭಿನಂದನೆಗಳ ಮಹಾಪೂರ ಹರಿಸುವುದನ್ನು ತಡೆಯಲು ಸಾಧ್ಯವಾಗದ ಕಾರಣ ಈ ಪೋಸ್ಟ್ ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು.
ಭಾರತೀಯ ತಂಡದ ಸದಸ್ಯೆ ವೇದಾ ಕೃಷ್ಣಮೂರ್ತಿ ಬಗ್ಗೆ ಹೇಳುವುದಾದರೆ, ಮೂಲತಃ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯವಳಾದ ವೇದಾ, ಭಾರತಕ್ಕಾಗಿ 48 ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು ಎಂಟು ಅರ್ಧ ಶತಕಗಳೊಂದಿಗೆ 829 ರನ್ ಗಳಿಸಿದ್ದಾರೆ. ಅವರು 76 ಟಿ20 ಪಂದ್ಯಗಳನ್ನು ಆಡಿದ್ದಾರೆ ಮತ್ತು 875 ರನ್ ಗಳಿಸಿದ್ದಾರೆ.
ಕಳೆದ 2021ರಲ್ಲಿ ವೇದಾ ಕೃಷ್ಣಮೂರ್ತಿ ಅವರು ಕೋವಿಡ್-19 ಕಾರಣದಿಂದಾಗಿ ತನ್ನ ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡು ತಮ್ಮ ಜೀವನದ ಕಠಿಣ ಅವಧಿಯನ್ನು ಎದುರಿಸಿದರು.
ಮೈಸೂರು ದಸರಾ ಉದ್ಘಾಟನೆ- ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ
ಅರ್ಜುನ್ ಹೊಯ್ಸಳ ಅವರು ಡಿಸೆಂಬರ್ 2016ರಲ್ಲಿ ಕರ್ನಾಟಕ ರಣಜಿ ತಂಡಕ್ಕೆ ಪಾದಾರ್ಪಣೆ ಮಾಡಿದರು. ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಅವರು ಇಲ್ಲಿಯವರೆಗೆ 10 ಪಂದ್ಯಗಳನ್ನು ಆಡಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ