ಕ್ರೀಡೆ

ಅರ್ಜುನ್ ಹೊಯ್ಸಳ ಜೊತೆ ಟೀಂ ಇಂಡಿಯಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಹಸೆಮಣೆ ಏರಲಿದ್ದಾರೆ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಬ್ಯಾಟರ್ ಮತ್ತು ಕನ್ನಡತಿ ವೇದಾ ಕೃಷ್ಣಮೂರ್ತಿ ಅವರು ಬ್ಯಾಟರ್ ಅರ್ಜುನ್ ಹೊಯ್ಸಳ ಅವರೊಂದಿಗೆ ನಿಶ್ಚಿತಾರ್ಥವನ್ನು ಘೋಷಿಸುತ್ತಿದ್ದಂತೆ ಭಾನುವಾರ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸಿದರು.

ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು. ಆದರೆ ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗುತ್ತಿದ್ದು, ಶೀಘ್ರದಲ್ಲೇ ಸಪ್ತಪದಿ ತುಳಿಯಲ್ಲಿದ್ದಾರೆ. ಇದನ್ನು ಸ್ವತಃ ವೇದಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ.

ಅರ್ಜುನ್ ಹೊಯ್ಸಳ ಅವರು ವೇದಾ ಕೃಷ್ಣಮೂರ್ತಿ ಅವರೊಂದಿಗಿನ ಚಿತ್ರವನ್ನು Instagram ಪೋಸ್ಟ್ ಮಾಡಿದ್ದಾರೆ. ಲಡಾಖ್‌ನ ಸುಂದರವಾದ ಸ್ಥಳದ ಹಿನ್ನೆಲೆಯಲ್ಲಿ, ಅರ್ಜುನ್ ಅವರು ವೇದಾಗೆ ಪ್ರಪೋಸ್ ಮಾಡುತ್ತಿರುವುದು .

‘ಅವಳು ಒಪ್ಪಿಗೆಯ ಮುದ್ರೆ ಒತ್ತಿದಳು’ ಎಂದು ಅರ್ಜುನ್ ಚಿತ್ರಕ್ಕೆ ಶೀರ್ಷಿಕೆ ನೀಡಿದ್ದಾರೆ. ಅಭಿಮಾನಿಗಳು ಮತ್ತು ಸಹ ಆಟಗಾರರು ಈ ಪ್ರೇಮಿಗಳ ಕಡೆಗೆ ತಮ್ಮ ಅಭಿನಂದನೆಗಳ ಮಹಾಪೂರ ಹರಿಸುವುದನ್ನು ತಡೆಯಲು ಸಾಧ್ಯವಾಗದ ಕಾರಣ ಈ ಪೋಸ್ಟ್ ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು.

ಭಾರತೀಯ ತಂಡದ ಸದಸ್ಯೆ ವೇದಾ ಕೃಷ್ಣಮೂರ್ತಿ ಬಗ್ಗೆ ಹೇಳುವುದಾದರೆ, ಮೂಲತಃ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯವಳಾದ ವೇದಾ, ಭಾರತಕ್ಕಾಗಿ 48 ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು ಎಂಟು ಅರ್ಧ ಶತಕಗಳೊಂದಿಗೆ 829 ರನ್ ಗಳಿಸಿದ್ದಾರೆ. ಅವರು 76 ಟಿ20 ಪಂದ್ಯಗಳನ್ನು ಆಡಿದ್ದಾರೆ ಮತ್ತು 875 ರನ್ ಗಳಿಸಿದ್ದಾರೆ.

ಕಳೆದ 2021ರಲ್ಲಿ ವೇದಾ ಕೃಷ್ಣಮೂರ್ತಿ ಅವರು ಕೋವಿಡ್-19 ಕಾರಣದಿಂದಾಗಿ ತನ್ನ ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡು ತಮ್ಮ ಜೀವನದ ಕಠಿಣ ಅವಧಿಯನ್ನು ಎದುರಿಸಿದರು.

ಮೈಸೂರು ದಸರಾ ಉದ್ಘಾಟನೆ- ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ

ಅರ್ಜುನ್ ಹೊಯ್ಸಳ ಅವರು ಡಿಸೆಂಬರ್ 2016ರಲ್ಲಿ ಕರ್ನಾಟಕ ರಣಜಿ ತಂಡಕ್ಕೆ ಪಾದಾರ್ಪಣೆ ಮಾಡಿದರು. ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಅವರು ಇಲ್ಲಿಯವರೆಗೆ 10 ಪಂದ್ಯಗಳನ್ನು ಆಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024