2024ಕ್ಕೆ ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಪ್ರಯಾಣ- ನೌಕೆಯ ಚಿತ್ರ ಬಿಡುಗಡೆ

Team Newsnap
1 Min Read

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ. ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ.

ಗಗನಯಾನ ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ. 

Share This Article
Leave a comment