ಒಲಿಪಿಂಕ್ಸ್​​ನಲ್ಲಿ ಭಾರತಕ್ಕೆ ಐತಿಹಾಸಿಕ ದಿನ: ನೀರಜ್​​ ಚಿನ್ನದ ಪದಕ ಗೆದ್ದದ್ದು ಹೇಗೆ ?

Team Newsnap
1 Min Read

ಜಾವಲಿನ್​ ಥ್ರೋನಲ್ಲಿ ಭಾರತದ ನೀರಜ್​​ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್​ನಲ್ಲಿ ಭಾರತದ 120 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ.

ಶತಮಾನದ ಬಳಿಕ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ದಕ್ಕಿದೆ. ಜಾವಲಿನ್​ ಥ್ರೋನಲ್ಲಿ ಭಾರತದ ನೀರಜ್​​ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

niraj 1

120 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಹೆಗ್ಗಳಿಕೆಗೆ ನೀರಜ್​ ಪಾತ್ರರಾಗಿದ್ದಾರೆ. ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಇದು 7ನೇ ಪದಕವಾಗಿದೆ.

23 ವರ್ಷದ ನೀರಜ್ ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಹಾಗೂ ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಎಸೆದರು. ಆದರೆ ಮೂರನೇ ಪ್ರಯತ್ನ 76.79 ಮೀ.ಗಿಂತ ಕಡಿಮೆ ಎಸೆದಿದ್ದರು.

ಇನ್ನು ಎರಡನೇ ಪ್ರಯತ್ನದಲ್ಲಿ ಎಲ್ಲರಿಗಿಂತಲೂ ಹೆಚ್ಚು ದೂರ ಎಸೆದಿದ್ದರಿಂದ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು.

ಅಥ್ಲೆಟಿಕ್ಸ್​ ವಿಭಾಗದಲ್ಲಿ 120 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಭಾರತ ಚಿನ್ನದ ಪದಕ ಗೆದ್ದಿದೆ.

ಮೋದಿ ಅಭಿನಂದನೆ :

ನೀರಜ್​​ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಕ್ಕುತ್ತಲೇ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಅಭಿನಂದಿಸಿದ್ದಾರೆ.

ನೀರಜ್​ ಶನಿವಾರ ಸಾಧಿಸಿರುವುದನ್ನು ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದೊಂದು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ್ದಾರೆ.

Share This Article
Leave a comment