ಶ್ರವಣಬೆಳಗೊಳದ ಜೈನ ಮಠಕ್ಕೆ ಇಂದ್ರಜೈನ್‌ ಉತ್ತರಾಧಿಕಾರಿ

Team Newsnap
1 Min Read
Indrajain the successor of Jain Math at Sravanabelagola ಶ್ರವಣಬೆಳಗೊಳದ ಜೈನ ಮಠಕ್ಕೆ ಇಂದ್ರಜೈನ್‌ ಉತ್ತರಾಧಿಕಾರಿ #thenewsnap #jaintemple

ಶ್ರವಣಬೆಳಗೊಳ ಜೈನ ಮಠದ ಉತ್ತರಾಧಿಕಾರಿಯಾಗಿ ಆಗಮಶಾಸ್ತ್ರಿ ಇಂದ್ರಜೈನ್‌ ಅವರು ನೇಮಕವಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಹರೆಯದ ಆಗಮಶಾಸ್ತ್ರಿ ಇಂದ್ರಜೈನ್‌ (22)ಅವರು ಬಿಕಾಂ ಪದವೀಧರರು. ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಆರೋಗ್ಯ ಹದಗೆಡುತ್ತಿದ್ದ ಹಿನ್ನೆಲೆ ಮೂರು ತಿಂಗಳ ಹಿಂದೆಯೇ ಶ್ರವಣಬೆಳಗೊಳದ ಜೈನ ಮಠದ ಉತ್ತರಾಧಿಕಾರಿ ನೇಮಕದ ಚರ್ಚೆ ನಡೆದಿತ್ತು.

ಜೈನ ಮಠಕ್ಕೆ ಇಂದ್ರ ವಂಶಸ್ಥರೇ ಸ್ವಾಮೀಜಿಯರಾಗುವ ಪರಂಪರೆಯಿರುವುದರಿಂದ ಆ ಬಗ್ಗೆ ವಿವಿಧ ಜೈನಮಠದ ಸ್ವಾಮೀಜಿಯವರು, ಶ್ರವಣಬೆಳ ಗೊಳದ ದಿಗಂಬರ ಜೈನ ಮಠದ ಟ್ರಸ್ಟಿಗಳು, ಜೈನ ಸಮುದಾಯದ ಮುಖಂಡರು ಚರ್ಚಿಸಿ ಆಗಮಶಾಸ್ತ್ರಿ ಇಂದ್ರಜೈನ್‌ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು.


ಆಗಮಶಾಸ್ತ್ರಿ ಇಂದ್ರಜೈನ್‌ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಂಡ ನಂತರ ಅವರಿಗೆ ಜೈನ ಧರ್ಮದ ಕ್ಷುಲ್ಲಕ ದೀಕ್ಷೆ ನೀಡಲಾಗಿತ್ತು.

ಕಳೆದ 20 ದಿನಗಳಿಂದಲೂ ಶ್ರವಣಬೆಳಗೊಳ ಮಠದಲ್ಲಿ ಆಗಮಶಾಸ್ತ್ರಿ ಇಂದ್ರಜೈನ್‌ ಅವರಿಗೆ ಮಠದ ಪರಂಪರೆ, ಆಚಾರ – ವಿಚಾರ, ಮಠದ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಲಾಗುತ್ತಿತ್ತು.

ಶ್ರವಣಬೆಳಗೊಳ ಮಠ ಪೀಠಾರೋಹಣದೊಂದಿಗೆ ಆಗಮಶಾಸ್ತ್ರಿ ಇಂದ್ರಜೈನ್‌ ಅವರಿಗೆ ನೂತನ ನಾಮಾಂಕಿತವಾಗಲಿದ್ದು, ಪೀಠಾರೋಹಣದ ಧಾರ್ಮಿಕ ವಿಧಿವಿಧಾನಗಳು ಇನ್ನಷ್ಟೇ ಆಗಬೇಕಾಗಿದೆ.ಇದನ್ನು ಓದಿ –ಬಿಜೆಪಿ ನಾಯಕ ಚಂದಗಾಲು ಶಿವಣ್ಣನಿಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

Share This Article
Leave a comment