ಇಂಡುವಾಳು ಸಚ್ಚಿ ಬಿಜೆಪಿಗೆ ಸೇರ್ಪಡೆ; ಮಂಡ್ಯದ 7 ಕ್ಷೇತ್ರಗಳಲ್ಲಿ ಗೆಲುವು ಖಚಿತ- ಸಚಿವ ನಾರಾಯಣಗೌಡ

Team Newsnap
1 Min Read
Induvalu Sachi joins BJP; Victory in 7 constituencies of Mandya is certain - Minister Narayana Gowda ಇಂಡುವಾಳು ಸಚ್ಚಿ ಬಿಜೆಪಿಗೆ ಸೇರ್ಪಡೆ; ಮಂಡ್ಯದ 7 ಕ್ಷೇತ್ರಗಳಲ್ಲಿ ಗೆಲುವು ಖಚಿತ- ಸಚಿವ ನಾರಾಯಣಗೌಡ

ಸಂಸದೆ ಸುಮಲತಾ ಆಪ್ತ , ಎಸ್. ಸಚ್ಚಿದಾನಂದ ಮತ್ತಿತರ ಕಾಂಗ್ರೆಸ್ ಮುಖಂಡರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಕೆ. ಸಿ ನಾರಾಯಣಗೌಡ, ವಿಧಾನಪರಿಷತ್ ಸದಸ್ಯ ಯೋಗೇಶ್ವರ್ ಅವರ ಸಮ್ಮುಖದಲ್ಲಿ 2013ರ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಲ್. ಲಿಂಗರಾಜು ಮತ್ತಿತರರೊಂದಿಗೆ ಇಂಡುವಾಳ ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆಯಾದರು.ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಾಧ್ಯತೆ?

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಫ್ಲಾನ್ ಮಾಡಿದ್ದಾರೆ, ಸುಮಲತಾರ ಮುಂದಿನ ಹೆಜ್ಜೆ ತೀವ್ರ ಕುತೂಹಲ ಕೆರಳಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಖಾತೆ ಸಚಿವ ಕೆ.ಸಿ. ನಾರಾಯಣಗೌಡ, ಕಾಂಗ್ರೆಸ್ಸಿನ ಹಲವಾರು ಮುಖಂಡರು ಪಕ್ಷ ಸೇರಿದ್ದರಿಂದ ಬಿಜೆಪಿ ಇನ್ನಷ್ಟು ಬಲಗೊಂಡಿದೆ. ಇತರ ಪಕ್ಷಗಳ ಭದ್ರಕೋಟೆಯನ್ನು ಒಡೆಯುವ ದೊಡ್ಡ ಶಕ್ತಿ ಇದೀಗ ಬಿಜೆಪಿಗೆ ಬಂದಿದೆ.

ಕನಿಷ್ಠ 7 ಶಾಸಕರ ಸ್ಥಾನವನ್ನು ನಾವು ಮಂಡ್ಯದಲ್ಲಿ ಗೆಲ್ಲುವುದು ಖಚಿತ. ಜೆಡಿಎಸ್- ಕಾಂಗ್ರೆಸ್ ಪಕ್ಷಕ್ಕೆ ನಾವು ಭಯಪಡಬೇಕಿಲ್ಲ ಎಂದು ತಿಳಿಸಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಿ, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಎದುರಿಸಲು ಬಿಜೆಪಿ ಸಮರ್ಥ ಅಭ್ಯರ್ಥಿಗಳನ್ನು ಹೊಂದಿದೆ. ಪಕ್ಷಕ್ಕೆ ಹಠ- ಛಲ ಇರಬೇಕು. ಪಕ್ಷವು ಮೋದಿಜಿ- ಬೊಮ್ಮಾಯಿ ಮತ್ತು ಇತರ ಸಮರ್ಥ ನಾಯಕರ ನೇತೃತ್ವದಲ್ಲಿ ರಾಜ್ಯದಲ್ಲಿ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸದಿಂದ ತಿಳಿಸಿದರು.

ಸಚಿವ ಡಾ|| ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ ಕಾಂಗ್ರೆಸ್- ಜೆಡಿಎಸ್ ಕುಟುಂಬ ಪಕ್ಷಗಳಾದರೆ, ಬಿಜೆಪಿ ಜನಪರ ಪಕ್ಷ ಎಂದರು.

Share This Article
Leave a comment