ಬೆಂಗಳೂರು : ಕರ್ನಾಟಕ ಮಾಹಿತಿ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ, ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ಸರ್ಕಾರ ಶನಿವಾರ ವರ್ಗಾವಣೆ ಮಾಡಿದೆ.
ನಿಂಬಾಳ್ಕರ್ ಅವರ ಜಾಗಕ್ಕೆ ಐಎಎಸ್ ಅಧಿಕಾರಿ ವಿಕಾಸ ಸುರಳ್ಕರ್ ಅವರನ್ನು ನೇಮಕ ಮಾಡಲಾಗಿದೆ.
ಹೇಮಂತ್ ನಿಂಬಾಳ್ಕರ್ ಪತ್ನಿ ಡಾ.ಅಂಜಲಿ ನಿಂಬಾಳ್ಕರ್ ಕಾಂಗ್ರೆಸ್ ಪಕ್ಷದಿಂದ ಕೆನರಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಚುನಾವಣೆಗೆ ಸ್ಪರ್ಧಿಸುವವರು ಇಲ್ಲವೇ ಅವರ ಸಂಬಂಧಿಗಳು ಚುನಾವಣೆ ಮುಗಿಯುವವರೆಗೂ ಪ್ರಮುಖ ಹುದ್ದೆಯಲ್ಲಿ ಇರಲು ಅವಕಾಶ ಇಲ್ಲ. ಈ ಕಾರಣದಿಂದ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಚುನಾವಣೆ ಆಯೋಗದ ಆದೇಶದ ಹಿನ್ನೆಲೆಯಲ್ಲಿಯೇ ಅವರನ್ನು ವರ್ಗ ಮಾಡಲಾಗಿದ್ದು, ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ.
ನೂತನ ಆಯುಕ್ತ ವಿಕಾಸ ಸುರಳ್ಕರ್ ಈವರೆಗೂ ಬೃಹತ್ ಬೆಂಗಳೂರು ನಗರ ಪಾಲಿಕೆಯಲ್ಲಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದರು. ಮಹಾರಾಷ್ಟ್ರ ಮೂಲದ ವಿಕಾಸ ಸುರಳ್ಕರ್ ಖಡಕ್ ಅಧಿಕಾರಿ. ಈ ಹಿಂದೆ ಬಾಗಲಕೋಟೆ, ಯಾದಗಿರಿಯಲ್ಲಿ ಎಸಿ ಹಾಗೂ ಜಿಲ್ಲಾಪಂಚಾಯಿತಿ ಸಿಇಒ, ವಿಜಯಪುರ ಜಿಲ್ಲಾಪಂಚಾಯಿತಿ ಸಿಇಒ, ಕೊಪ್ಪಳ ಡಿಸಿಯಾಗಿ ಕೆಲಸ ಮಾಡಿದ್ದಾರೆ. ಏ. 3 ರಂದು ಮಂಡ್ಯದಲ್ಲಿ ಸುಮಲತಾ ನಿರ್ಧಾರ ಪ್ರಕಟ
ಕೆಪಿಎಸ್ಸಿ ಕಾರ್ಯದರ್ಶಿಯಾಗಿಯೂ ಕೆಲ ಅವಧಿಗೆ ಕಾರ್ಯನಿರ್ವಹಿಸಿದ್ದರು. ಆರು ತಿಂಗಳಿನಿಂದ ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದರು.
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ