ಆಸ್ಟ್ರೇಲಿಯಾದ ಅಡಿಲೇಡ್ನ ಓವಲ್ ಇಂಟರ್ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆಯುವ ಈ ರೋಚಕ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಗಾಯಗೊಂಡಿದ್ದು, ವಿಶ್ವಕಪ್ ಟೂರ್ನಿಯಿಂದಲೇ ಹೊರಬೀಳೋ ಆತಂಕ ಎದುರಾಗಿದೆ.
ಇಂದು ನೆಟ್ ಪ್ರ್ಯಾಕ್ಟೀಸ್ ಮಾಡುವ ಸಂದರ್ಭದಲ್ಲಿ ಶರ್ಮಾ ಕೈಗೆ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಾಡಿದ್ದು ಸೆಮಿಫೈನಲ್ ಪಂದ್ಯವನ್ನು ಬಲಿಷ್ಠ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಆಡಲಿದೆ. ಮತ್ತೆ ಮುಂದಿನ ಸಿಎಂ ಸಿದ್ದರಾಮಯ್ಯ: ಹುಬ್ಬಳ್ಳಿಯಲ್ಲಿ ಮೊಳಗಿದ ಘೋಷಣೆ
ಇವತ್ತು ಬೆಳಗ್ಗೆ ಅಡಿಲೇಡ್ನ ಓವಲ್ ಸ್ಟೇಡಿಯಂನ ನೆಟ್ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ಮಾಡ್ತಿರುವಾಗ ಬಲಗೈನ ಮುಂಗೈಗೆ ಬಾಲ್ ಬಡಿದು ಗಾಯವಾಗಿದೆ ತೀವ್ರ ನೋವಿಗೆ ಕಾರಣವಾಗಿದೆ. ತಕ್ಷಣ ಅಲ್ಲಿನ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ್ದಾರೆ.
ವೈದ್ಯಾಧಿಕಾರಿಗಳು ಶರ್ಮಾ ಅವರಿಗೆ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಸೆಮಿಫೈನಲ್ನಲ್ಲಿ ರೋಹಿತ್ ಶರ್ಮಾ ಆಡ್ತಾರಾ? ಇಲ್ಲವೋ ಎಂಬುವುದು ಸದ್ಯದಲ್ಲೇ ಗೊತ್ತಾಗಲಿದೆ.
ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಗೆ ಒಂದು ವೇಳೆ ರೋಹಿತ್ ಶರ್ಮಾ ಅಲಭ್ಯರಾದ್ರೆ, ಟೀಂ ಇಂಡಿಯಾ ಮುಂದಿನ ಕ್ಯಾಪ್ಟನ್ ಯಾರು ? ಸದ್ಯ ತಂಡದ ಉಪ ನಾಯಕ ಕೆ.ಎಲ್ ರಾಹುಲ್ ಟೀಂ ಇಂಡಿಯಾ ಕ್ಯಾಪ್ಟನ್ ಆಗಬಹುದು ಅಥವಾ ಅನುಭವಿ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ಕೋಚ್ ದ್ರಾವಿಡ್ ಮಣೆ ಹಾಕಬಹುದಾಗಿದೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ