ಪ್ರತಿಭಟನೆಯ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ಸಂಭವಿಸಿದ್ದು, ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯದ ಆರೋಪ
ಡಿಸೆಂಬರ್‌ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರವೇ ಸಂಘಟನೆ ಆರೋಪಿಸಿದೆ.
ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದದ ಸಮಸ್ಯೆಗಳಿದ್ದರಿಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ. ಈ ಕಾರಣದಿಂದ ಪರೀಕ್ಷೆ ಫಲಿತಾಂಶವನ್ನು ತಡೆಹಿಡಿದು ಮರುಪರೀಕ್ಷೆ ನಡೆಸಬೇಕೆಂದು ಕರವೇ ಸಂಘಟನೆ ಒತ್ತಾಯಿಸಿದೆ.
ಅನುವಾದದ ಸಮಸ್ಯೆಗಳ ಕುರಿತು ಆರೋಪ
ಕರವೇ ಕಾರ್ಯಕರ್ತರು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ, “ನಾವು ಈಗಾಗಲೇ ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೇವೆ. ಆದರೆ ಮರುಪರೀಕ್ಷೆಯಲ್ಲಿಯೂ ಅದೇ ತಪ್ಪುಗಳು ಪುನರಾವೃತ್ತಿಯಾಗಿವೆ. ಕನ್ನಡ ಅನುವಾದದಲ್ಲಿ ಮತ್ತೆ ಗೊಂದಲಗಳು ಕಂಡುಬಂದಿವೆ” ಎಂದು ಆಕ್ಷೇಪಿಸಿದ್ದಾರೆ.ಇದನ್ನು ಓದಿ –8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಈ ಕುರಿತು ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಕರವೇ ಸಂಘಟನೆ ಒತ್ತಾಯಿಸಿದ್ದು, ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು