ಮಾಗಡಿ ತಾಲ್ಲೂಕಿನ ವೀರಪುರದಲ್ಲಿ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರತಿಮೆ ನಿರ್ಮಾಣದ ಸಂಬಂಧ ಜಿಲ್ಲಾಧಿಕಾರಿ ಡಾ. ಕೆ ರಾಕೇಶ್ ಕುಮಾರ್ ಶುಕ್ರವಾರ ಸಭೆ ನಡೆಸಿ ಪರಿಶೀಲನೆ ನಡೆಸಿದರು.
ಪ್ರತಿಮೆ ನಿರ್ಮಾಣ ಸಂಬಂಧ 16 ಎಕರೆ 16 ಕುಂಟೆ ಸ್ಥಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನೀಡಲಾಗಿದೆ.
ಇಲ್ಲಿ 5 ಎಕರೆಗೆ ಅರಣ್ಯ ಇಲಾಖೆಗೆ ಒಳಪಟ್ಟು ಸಮಸ್ಯೆ ಇರುತ್ತದೆ. ಅದನ್ನು ಪರಿಶೀಲಿಸಿ ಪರಿಹಾರ ಮಾಡಲಾಗುವುದು ಎಂದರು.
ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರತಿಮೆ ನಿರ್ಮಾಣ ಪುಣ್ಯದ ಕೆಲಸ. ವೀರಪುರದಲ್ಲಿ ವಿಶ್ವ ಪಾರಂಪರಿಕ ಕೇಂದ್ರ ಅಭಿವೃದ್ಧಿ ಪಡಿಸಲು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು. ವೀರಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ರುದ್ರೇಶ್, ವ್ಯವಸ್ಥಾಪಕ ನಿರ್ದೇಶಕ ಗಂಗಾಧರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವಿನಯ್ ಕುಮಾರ್ ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ