ಹಾವೇರಿ : ಕಾರ್ಮಿಕ ಇಲಾಖೆ ಅಧಿಕಾರಿಯೊಬ್ಬರು 5 ಸಾವಿರ ರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರಾಣೇಬೆನ್ನೂರು ತಾಲೂಕು ಕಾರ್ಮಿಕ ಇಲಾಖೆ ನಿರೀಕ್ಷಕಿ ಮಮ್ತಾಜ್ ಬೇಗಂ ಲಂಚದ ಆಸೆಗೆ ಕೈಚಾಚಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಾರ್ಮಿಕ ಇಲಾಖೆ ಕಾರ್ಡ್ ಮಾಡಿಕೊಡಲು ಲಂಚ ಪಡೆಯುತ್ತಿದ್ದಾಗ ಮಮ್ತಾಜ್ ಮುಖ ಅನಾವರಣಗೊಂಡಿದೆ.ಕೋಟ್ಯಾಧಿಪತಿ ಕೆ ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತ್ತು
ಕಾರ್ಮಿಕ ಇಲಾಖೆ ಕಚೇರಿಗೆ ಲೋಕಾಯುಕ್ತ ಸಿಪಿಐ ಆಂಜನೇಯ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಮಮ್ತಾಜ್ ನಾರಾಯಣಪ್ಪ ಎಂಬ ಕಾರ್ಮಿಕನಿಂದ ಹಣ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಐದು ಸಾವಿರ ನಗದು ಸಮೇತ ಮಮ್ತಾಜ್ ಬೇಗಂ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.