ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಪ್ಪಿಸಲು ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಾಫಿಕ್ ಪೊಲೀಸ್ ಇನ್ಟರ್‌ಸೆಪ್ಟರ್‌ಗಳನ್ನ ಅಳವಡಿಸಲಾಗಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅತೀ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲು ರಾಡಾರ್ ಸ್ಪೀಡ್ ಗನ್‌ಗಳನ್ನ ಬಳಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಎಕ್ಸ್‌ಪ್ರೆಸ್‌ವೇ ಯಲ್ಲಿ ಅಪಘಾತಗಳು ಹೆಚ್ಚಾಗಿವೆ. ಅಪಘಾತದಲ್ಲಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಎಡಿಜಿಪಿ ಅಲೋಕ್ ಕುಮಾರ್ ಅವರು ಎಕ್ಸ್‌ಪ್ರೆಸ್‌ವೇನಲ್ಲಿ ಪರಿಶೀಲನೆ ನಡೆಸಿದ್ದರು.
ಹೆದ್ದಾರಿಯಲ್ಲಿ ಸಂಚರಿಸುವಾಗ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ವಾಹನ ಸವಾರರಿಗೆ ಎಚ್ಚರಿಕೆ ಕೊಟ್ಟಿದ್ದರು. ವೇಗವಾಗಿ ವಾಹನ ಚಲಾಯಿಸಿದವರ ಡಿಎಲ್ ರದ್ದು ಮಾಡಲಾಗುವುದು ಎಂದು ಸಹ ಎಚ್ಚರಿಸಿದ್ದರು.
ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಎಕ್‌ಪ್ರೆಸ್‌ವೇನಲ್ಲಿ ವಾಹನಗಳ ವೇಗದ ಚಾಲನೆ ತಪ್ಪಿಸಲು ಟ್ರಾಫಿಕ್ ಪೊಲೀಸ್ ಇನ್ಟರ್‌ಸೆಪ್ಟರ್‌ಗಳನ್ನ ಬಳಸಿದ್ದಾರೆ.
ದಂಡ ಕಟ್ಟುವ ಹಣ ಉಳಿಸಿಕೊಳ್ಳಬೇಕು ಎನ್ನುವ ಕಾರಣಕ್ಕಲ್ಲ, ಜೀವ ಉಳಿಸುವುದಕ್ಕಾಗಿ ಸಂಚಾರ ನಿಯಮ ಪಾಲಿಸಿ ಎಂದು ಜನರಿಗೆ ಕಿವಿಮಾತು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು