ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ
ಮಧುವನಹಳ್ಳಿ ಪಂಚಾಯತಿ ಮುಂಭಾಗ ದಲಿತ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದರು .
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಅತೀ ಶೀಘ್ರದಲ್ಲೇ ಕ್ರಮ ತಗೆದುಕೊಳ್ಳುವoತೆ ಪತ್ರ ಬರೆಯುತ್ತೇನೆ ಎಂದು ಕೊಳ್ಳೇಗಾಲ ತಾಲೂಕು ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹೇಳಿದ್ದರು.
ಇದೀಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪುವಿತಾ ರವರು ಮಧುವನಹಳ್ಳಿ ಗ್ರಾಮದಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಡಿಓ ಶ್ರೀಮತಿ ಪುಷ್ಪಲತಾ ರವರನ್ನು ಕರ್ನಾಟಕ ನಾಗರೀಕ ಸೇವಾ ನಿಯಮದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ವಿರುದ್ಧವಾಗಿ ವರ್ತಿಸಿದ ಕಾರಣ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯತೆ ತೋರಿದ ವಿಚಾರವಾಗಿ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ವರದಿ :- ನಾಗೇಂದ್ರ ಪ್ರಸಾದ್
More Stories
ಫೆ. 8ಕ್ಕೆ CCL ಉದ್ಘಾಟನೆ – DCM DK ಶಿವಕುಮಾರ್ ಅವರನ್ನು ಆಹ್ವಾನಿಸಿದ ನಟ ಕಿಚ್ಚ ಸುದೀಪ್
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕೋಟ್ಯಂತರ ಅಕ್ರಮ – ದಾಖಲೆ ಬಿಡುಗಡೆ ಮಾಡಿದ ಕಾನೂನು ವಿದ್ಯಾರ್ಥಿ