ನಟ ಪುನೀತ್ ರಾಜ್‍ಕುಮಾರ್ ಫೋಟೋ ಮುಂದೆ ‘ಏಕ್ ಲವ್ ಯಾ’ ಸಿನಿಮಾ ತಂಡ ಶಾಂಪೇನ್ ಚಿಮ್ಮಿಸಿ ಸಂಭ್ರಮಮಾಚರಣೆ ಮಾಡಿರುವುದು ಅಪ್ಪು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು,
ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತ್ತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಶಾಂಪೇನ್ ಚಿಮ್ಮಿಸಿದ್ದಾರೆ. ಈ ವೇಳೆ ಅಪ್ಪು ಫೋಟೋ ಎಲ್ ಇಡಿ ಮೇಲೆ ಬಂದಿದೆ. ಈ ಕುರಿತಾಗಿ ಚಿತ್ರತಂಡ ಕ್ಷಮೆ ಕೇಳ ಬೇಕು ಎಂದು ಸಾರಾಗೋವಿಂದ್ ಅವರು ಒತ್ತಾಯಿಸಿದ್ದಾರೆ
ಅಪ್ಪು ಅಗಲಿಕೆ ನೋವಿನಿಂದ ಹೊರ ಬಂದಿಲ್ಲ. ಆದರೆ ಏಕ್ ಲವ್ ಯಾ ಸಿನಿಮಾ ತಂಡ ಅಪ್ಪು ಫೋಟೋ ಮುಂದೇ ಶಾಂಪೇನ್ ಚಿಮ್ಮಿಸಿ ಸಂಭ್ರಮಾಚರಣೆ ಮಾಡಿ ಎಡವಟ್ಟು ಮಾಡಿಕೊಂಡಿದೆ.
ಶಾಂಪೇನ್ ಚಿಮ್ಮಿಸುವ ವೇಳೆ ಹಾಡು ಪ್ರಸಾರವಾಗಿದೆ. ಇದರಿಂದ ಅಪ್ಪು ಫೋಟೋಗೆ ಅವಮಾನ ಮಾಡಿದಂತಾಗಿದೆ. ಈ ಕುರಿತಾಗಿ ಎಲ್ಲೆಡೆ ಆಕ್ರೋಶವ್ಯಕ್ತವಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು