March 18, 2025

Newsnap Kannada

The World at your finger tips!

cheluvaraya swamy

ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ

Spread the love

ಬೆಂಗಳೂರಿನಲ್ಲಿ ಮುಂದಿನ ತಿಂಗಳು ಜನವರಿ 23, 24, 25 ರಂದು 3 ದಿನಗಳ ಕಾಲ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ನಡೆಯಲಿದೆ. ಅದರ ಪ್ರಯುಕ್ತ ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವ ಕಾರ್ಯಕ್ರಮಗಳಾಗಿ ಕೃಷಿ ಮೇಳ ಹಾಗೂ ಸಿರಿಧಾನ್ಯ ಮೇಳವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯ ಸ್ವಾಮಿ ಅವರು ತಿಳಿಸಿದರು.

ಅವರು ಇಂದು ಮಂಡ್ಯ ನಗರದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಿರಿಧಾನ್ಯ ಅತ್ಯಂತ ಆರೋಗ್ಯಯುತ ಆಹಾರವಾಗಿದ್ದು, ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹಧನ ನೀಡುತ್ತಿದೆ. ಸಿರಿಧಾನ್ಯ ಮೇಳದಲ್ಲಿ ರಾಷ್ಟ ಮಟ್ಟದ ಹಾಗೂ ಅಂತರರಾಷ್ಟೀಯ ಮಟ್ಟದ ಮಾರಾಟಗಾರರು, ತಂತ್ರಜ್ಞಾನದ ಬಗ್ಗೆ ತಿಳಿಸುವ ಸಂಶೋಧಕರನ್ನೊಳಗೊಂಡಂತೆ ಅನೇಕ ಚರ್ಚೆಗಳು ನಡೆಯುತ್ತವೆ. ಎಲ್ಲಾ ರೈತರು ಈ ಬಗ್ಗೆ ತಿಳಿದುಕೊಂಡು ಆರೋಗ್ಯಕರವಾದ ಆಹಾರವನ್ನು ಬೆಳೆಯಲು ಸೂಕ್ತ ಕ್ರಮಗಳನ್ನು ಅನುಸರಿಸಬೇಕು. ಇಂದು ಸಿರಿಧಾನ್ಯ ನಡಿಗೆ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿರುವುದು ಸಂತೋಷವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ತಿಂಗಳು ನಡೆಯುವ ಸಿರಿಧಾನ್ಯ ಮೇಳದಲ್ಲಿ ಎಲ್ಲರೂ ಭಾಗವಹಿಸುವುದರ ಜೊತೆಗೆ, ಸಾರ್ವಜನಿಕರಿಗೆ ತಿಳಿಸಿ ಎಂದರು.

cheluva

ಜಿಲ್ಲೆಯಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯದಲ್ಲಿ ಹಿಂದೆಂದೂ ಇಷ್ಟೊಂದು ವಿಜೃಂಭಣೆಯಿಂದ ಯಾವ ಕಾರ್ಯಕ್ರಮವು ನಡೆದಿರಲಿಲ್ಲ ಎಂಬ ಅಭಿಪ್ರಾಯವು ಮೂಡಿ ಬಂದಿದೆ. ಬಹಳ ಯಶಸ್ವಿಯಾಗಿ ಜರುಗುತ್ತಿದ್ದು, ಇಂದು ನಾಳೆ 2 ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ನಡೆಯುವ ವಿಚಾರಗೋಷ್ಠಿ, ಮಳಿಗೆಗಳು, ವಸ್ತು ಪ್ರದರ್ಶನಗಳ ಸದುಪಯೋಗವನ್ನು ಪಡೆದುಕೊಳ್ಳಲು ಸಂಪೂರ್ಣ ಭಾಗವಹಿಸುವಿಕೆ ಇರಲಿ ಎಂದು ತಿಳಿಸಿದರು.

ಸಿರಿಧಾನ್ಯ ನಡಿಗೆ ಕಾರ್ಯಕ್ರಮವು ಸಿರಿಧಾನ್ಯ ನಡಿಗೆ – ಆರೋಗ್ಯದ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಆವರಣದಲ್ಲಿ ಸಮಾವೇಶಗೊಂಡಿತು.ಇದನ್ನು ಓದಿ –ಓದಿನ ಮಹತ್ವ

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಮುಖಂಡ ಹಾಗೂ ಕಲಾವಿದ ಸಚಿನ್ ಚಲುವರಾಯಸ್ವಾಮಿ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!