ಮಡಿಕೇರಿ: ಸುತ್ತಲೂ ಹಸಿರು ನೈಸರ್ಗಿಕ ಸೌಂದರ್ಯ ಮತ್ತು ಬೆಟ್ಟ-ಗುಡ್ಡಗಳ ಮಧ್ಯೆ ಕುಳಿತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ನೋಡುವ ಅವಕಾಶ ಕೊಡಗಿನ ಜನತೆಗೆ ಸಿಗಲಿದೆ. ಮುಂದಿನ 3-4 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಪೂರ್ಣಗೊಳ್ಳಲಿದೆ.
ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಕೊಡಗಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣದ ಕೆಲಸ ಈಗಾಗಲೇ ಆರಂಭವಾಗಿದ್ದು, ಮಡಿಕೇರಿ ತಾಲೂಕಿನ ಪಾಲೆಮಾಡು ಗ್ರಾಮದ ಬಳಿ ಪ್ರಸ್ತುತ ಕಾಮಗಾರಿ ನಡೆಯುತ್ತಿದೆ.
ಸುಮಾರು ₹50 ಕೋಟಿ ವೆಚ್ಚದಲ್ಲಿ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಜಿಲ್ಲಾಡಳಿತ ಈ ಯೋಜನೆಗಾಗಿ 12 ಎಕರೆ ಜಾಗವನ್ನು ಒದಗಿಸಿದೆ. ಧರ್ಮಶಾಲಾ ಕ್ರೀಡಾಂಗಣ ಮಾದರಿಯಂತೆ ಈ ಮೈದಾನವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ಪ್ರದೇಶದ ಬೆಟ್ಟಗಳನ್ನು ಸಮತಟ್ಟುಗೊಳಿಸುವ ಕಾರ್ಯ ನಡೆಯುತ್ತಿದೆ.
ಕೊಡಗು ಜನತೆಗೆ ಹಲವು ವರ್ಷಗಳಿಂದ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣದ ಅಗತ್ಯವಿತ್ತು, ಮತ್ತು ಈ ಯೋಜನೆಯೊಂದಿಗೆ ಆ ಕನಸು ನನಸಾಗುತ್ತಿದೆ. ಕ್ರೀಡಾಂಗಣದ ನಿರ್ಮಾಣವು ಸ್ಥಳೀಯ ಕ್ರೀಡಾಪಟುಗಳಿಗೆ ಒಂದು ದೊಡ್ಡ ವರದಾನವಾಗಲಿದೆ.
ಸದ್ಯ, ಜಿಲ್ಲೆಯಲ್ಲಿ ಆಸ್ಟ್ರೋ ಟರ್ಫ್ ಹಾಕಿ ಕ್ರೀಡಾಂಗಣವಿದ್ದರೂ, ಕ್ರಿಕೆಟ್ ಮತ್ತು ಅಥ್ಲೆಟಿಕ್ಸ್ ಮುಂತಾದ ಕ್ರೀಡೆಗಳಿಗೆ ತಕ್ಕ ಮಟ್ಟದ ಅಂತಾರಾಷ್ಟ್ರೀಯ ಮಟ್ಟದ ವ್ಯವಸ್ಥೆ ಇಲ್ಲದ ಕಾರಣ ಈ ಯೋಜನೆ ವಿಶೇಷ ಮಹತ್ವವನ್ನು ಹೊಂದಿದೆ.ಇದನ್ನು ಓದಿ –KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ಕ್ರೀಡಾಂಗಣದ ನಿರ್ಮಾಣ ಪೂರ್ಣಗೊಂಡ ನಂತರ, ಕೊಡಗು ಜಿಲ್ಲೆ ಕ್ರಿಕೆಟ್ ವಲಯದಲ್ಲಿ ಅಂತಾರಾಷ್ಟ್ರೀಯ ಗುರುತನ್ನು ಪಡೆಯಲಿದೆ ಎಂಬ ವಿಶ್ವಾಸ ಸ್ಥಳೀಯರಲ್ಲಿ ಮೂಡಿದ್ದು, ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ