ಅಂತಾರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ

Team Newsnap
1 Min Read
International Kempegowda Award announced ಅಂತಾರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ನಾಳೆ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ನೀಡುವ 2023 ಸಾಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ದೇಶದ ಪ್ರತಿಷ್ಟಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಉದ್ಯಮಿ , ಜಿರೋಧ ಸಂಸ್ಥಾಪಕ ನಿತಿನ್ ಕಾಮತ್ ಅವರು ಭಾಜನರಾಗಿದ್ದಾರೆ. ಅಲ್ಲದೆ, ಜಯದೇವ ಹೃದ್ರೋಗ ಸಂಸ್ಥೆಗೂ ಪ್ರಶಸ್ತಿ ಒಲಿದು ಬಂದಿದೆ.

ಸುದ್ದಿಗೋಷ್ಠಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶಸ್ತಿ ವಿಜೇತರ ಹೆಸರನ್ನು ಘೋಷಿಸಿದರು.

ಜೂನ್ 27 ರಂದು ನಡೆಯಲಿರುವ ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಕುದುರೆ ಮೇಲೆ ಕುಳಿತಿರುವ ಕೆಂಪೇಗೌಡರ ಪ್ರತಿಮೆಯನ್ನು ಒಳಗೊಂಡಿದೆ. ಬಿಎಲ್ ಶಂಕರ್ ನೇತೃತ್ವದಲ್ಲಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಸರ್ಕಾರ ಈ ಹಿಂದೆ ನಡೆದುಕೊಂಡು ಬಂದಂತೆ ಮುಂದುವರಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿ ಒಂದು ಸಮಿತಿ ರಚನೆ ಮಾಡಿದ್ದೆವು. ಅದರಂತೆ ಈ ಬಾರಿ ಒಂದು ಸಂಸ್ಥೆ ಮತ್ತು ಇಬ್ಬರು ಸಾಧಕರಿಗೆ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಜಯದೇವ ಹೃದ್ರೋಗ ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಬಿಜೆಪಿಯಲ್ಲಿ ಶಿಸ್ತು ಹಾಳಾಗಿದೆ : ವಲಸಿಗರ ವಿರುದ್ಧ ಈಶ್ವರಪ್ಪ ಗುಡುಗು

ಬೆಂಗಳೂರಿನ ಯುವಕ ಜಿರೋಧ ಸಂಸ್ಥಾಪಕ ನಿತಿನ್ ಕಾಮತ್ ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಮಹಿಳೆಯರಿಗೂ ಪ್ರಶಸ್ತಿ ಕೊಡಬೇಕು ಎನ್ನುವ ನಿಟ್ಟಿನಲ್ಲಿ ಕ್ರೀಡಾಪಟು ಅದಿತಿ ಅಶೋಕ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

Share This Article
Leave a comment