ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 21 ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಇದನ್ನು ಓದಿ –ಪದವೀಧರ ಕ್ಷೇತ್ರದ ಚುನಾವಣೆ : ಮಧ್ಯಾಹ್ನ 2 ಕ್ಕೆ ಶೇ. 39.39 ರಷ್ಟು ಮತದಾನ
ಈ ಕುರಿತು ಮಾಹಿತಿ ನೀಡಿದ ಸಂಸದ ಪ್ರತಾಪ್ ಸಿಂಹ ಯೋಗ ದಿನಾಚರಣೆ ಪ್ರಧಾನಿ ನರೇಂದ್ರ ಮೋದಿ ಯೋಗ ದಿನ 21ಕ್ಕೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಅದ್ದೂರಿ ವೇದಿಕೆ ಸಿದ್ಧವಾಗಿದೆ. ಮೋದಿ ಅವರು ಯೋಗ ಮಾಡುವ ವೇದಿಕೆಯಲ್ಲಿ ನನ್ನನ್ನು ಸೇರಿದಂತೆ ಸ್ಥಳೀಯ ಯಾವ ಶಾಸಕರಿಗೂ ಸ್ಥಾನ ಇರುವುದಿಲ್ಲ ಎಂದು ತಿಳಿಸಿದರು.
ಪ್ರಧಾನಿ ಮೋದಿ ಅವರ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ವೇದಿಕೆ ಮೇಲೆ ಅವಕಾಶ ಕಲ್ಪಿಸಲಾಗಿದೆ.
ರಾಜಕಾರಣಿಗಳು ವೇದಿಕೆಯ ಕೆಳಭಾಗದ ಒಂದು ಭಾಗದಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳು ಇಲ್ಲ. ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಯೋಗ ಮಾಡಲು ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು ಎಂದು ಹೇಳಿದ್ದಾರೆ.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು