January 30, 2026

Newsnap Kannada

The World at your finger tips!

ananya pande

ಎರಡನೇ ದಿನವೂ NCB ಯಿಂದ ಅನನ್ಯ ಪಾಂಡೆ ಗೆ ಡ್ರಿಲ್‌

Spread the love

ನವದೆಹಲಿ: ಡ್ರಗ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನನ್ಯಾ ಪಾಂಡೆ ಅವರನ್ನು ಎನ್‍ಸಿಬಿ (NCB) ಅಧಿಕಾರಿಗಳು ಇಂದೂ ಡ್ರಿಲ್ ಮಾಡಿದರು.

ನಿನ್ನೆ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು, ಇಂದೂ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದರು.ಎನ್‍ಸಿಬಿ ಸಮನ್ಸ್ ಹಿನ್ನಲೆಯಲ್ಲಿ ಇಂದು ಅನನ್ಯಾ ಪಾಂಡೆ ಮುಂಬೈನಲ್ಲಿರುವ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು ಸುಧೀರ್ಘ ವಿಚಾರಣೆ ನಡೆದಿದೆ . ಆರ್ಯನ್ ಖಾನ್ ಜೊತೆಗಿನ ಸಂಬಂಧ ಕುರಿತು ಅಧಿಕಾರಿಗಳು ಮಾಹಿತಿ ಪಡೆಯಲಿದ್ದಾರೆ, ಆರ್ಯನ್ ಖಾನ್ ಮತ್ತು ಅನನ್ಯಾ ಪಾಂಡೆ ನಡುವೆ ಮಾದಕ ವಸ್ತುಗಳ ಹಂಚಿಕೆ ಸಂಬಂಧ ವ್ಯಾಟ್ಸಪ್‍ನಲ್ಲಿ ಚಾಟ್ ನಡೆದಿದೆ ಎನ್ನಲಾಗಿದೆ.

ಎನ್‍ಸಿಬಿ ಅಧಿಕಾರಿಗಳು ಇದೇ ವ್ಯಾಟ್ಸಪ್ ಚಾಟ್ ಅನ್ನೇ ಪ್ರಮುಖ ಸಾಕ್ಷಿಯನ್ನಾಗಿಸಿಕೊಂಡು ಕೋರ್ಟ್‍ನಲ್ಲಿ ವಾದ ಮಂಡಿಸಿತ್ತು. ಈ ಹಿಂದೆ ಕೋರ್ಟ್‍ನಲ್ಲಿವಾದ ಮಂಡಿಸಿದ್ದ ಎನ್‍ಸಿಬಿ ಪರ ವಕೀಲರು, ಆರ್ಯನ್ ಖಾನ್ ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಅವರಿಂದ ಮಾಧಕ ವಸ್ತುಗಳನ್ನು ಖರೀದಿಸಿ ಬಾಲಿವುಡ್ ಮಂದಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಸದ್ಯ ಇದೇ ಅಂಶಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

error: Content is protected !!