ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ಹಸ್ತಾಂತರ ಮಾಡಿದೆ.
ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಘೋಷಣೆ ಮಾಡಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧ ಡಿಜಿ, ಐಜಿ ಅವರೊಂದಿಗೆ ಚರ್ಚೆ ಮಾಡಿದ್ದೀನಿ. ಪ್ರಕರಣ ವ್ಯವಸ್ಥಿತ ಪ್ರಕರಣ ಹಾಗೂ ಅಂತರ್ ರಾಜ್ಯ ಸಂಬಂಧ ಇರೋ ಕಾರಣ ಎನ್ಐಎ ಹಸ್ತಾಂತರ ಮಾಡಲು ಪತ್ರ ಬರೆಯಲು ಸೂಚನೆ ನೀಡಿದ್ದೇನೆ. ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು. ಇದನ್ನು ಓದಿ – ಸುರತ್ಕಲ್ ಫಾಜಿಲ್ ಹತ್ಯೆ: 14 ಮಂದಿ ಶಂಕಿತರು ವಶಕ್ಕೆ : ಮಂಗಳೂರು ಕಮೀಷನರ್
ಗಡಿಯಲ್ಲಿ ಸಿಸಿಟಿವಿ:
ಕೇರಳ ಗಡಿ ಪ್ರದೇಶದಲ್ಲಿ ಸಂಪೂರ್ಣವಾಗಿ ಚೇಕ್ ಪೋಸ್ಟ್ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು. ಪ್ರಮುಖ ಸಂಪರ್ಕ ಸ್ಥಳಗಳು ಹಾಗೂ ವಿಶೇಷವಾಗಿ ಸೂಷ್ಮ ಪ್ರದೇಶಗಳಲ್ಲಿ ಪೊಲೀಸ್ ಕ್ಯಾಂಪ್ಗಳನ್ನು ಹಾಕುವುದು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಕೆಎಸ್ಆರ್ಫಿ ಇನ್ನೊಂದು ಬೆಟಾಲಿಯನ್ಅನ್ನು ದಕ್ಷಿಣ ಕನ್ನಡಕ್ಕೆ ಶಿಫ್ಟ್ ಮಾಡುವುದು ಸೇರಿದಂತೆ ರಾತ್ರಿ ಗಸ್ತನ್ನು ಹೆಚ್ಚು ಮಾಡುವ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ವಿವರಣೆ ನೀಡಿದರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ