ಕೊವೀಡ್ ಆರ್ಭಟಕ್ಕೆ ಅರ್ಧಕ್ಕೆ ಸ್ಥಗಿತಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್ ಪಂದ್ಯಗಳು ನಾಳೆಯಿಂದ ದುಬೈನಲ್ಲಿ ಪುನಾರಂಭವಾಗಲಿದೆ. 8 ತಂಡಗಳು ಸಹ ಅಭ್ಯಾಸದಲ್ಲಿ ನಿರತವಾಗಿದೆ.
ಕೊರೋನಾ ಕಾರಣದಿಂದ ಐಪಿಎಲ್ ಟೂರ್ನಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಈಗ ಮತ್ತೆ ಐಪಿಎಲ್ ಆರಂಭವಾಗುತ್ತಿದ್ದು ಕ್ರಿಕೆಟ್ ಅಭಿಮಾನಿಗಳಲ್ಲಿ ಕಾತರತೆಯನ್ನು ಹೆಚ್ಚಿಸಿದೆ.
ಟೂರ್ನಿಯ ಮೊದಲ ಪಂದ್ಯದಲ್ಲಿ ಬಲಿಷ್ಟ ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸೆಣಸಲಿವೆ.
ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಒಟ್ಟು 8 ಪಂದ್ಯಗಳನ್ನಾಡಿ 6 ಜಯ ಹಾಗೂ 2 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
7 ಪಂದ್ಯಗಳಲ್ಲಿ 5 ಜಯ ಹಾಗೂ 2 ಸೋಲು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಸ್ಥಾನದಲ್ಲಿದೆ.
ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮೂರನೇ ಸ್ಥಾನ ಅಲಂಕರಿಸಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ