December 24, 2024

Newsnap Kannada

The World at your finger tips!

ben stokes

ಬೆನ್ ಸ್ಟೋಕ್ಸ್‌ಗೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕತ್ವ ಪಟ್ಟ ?

Spread the love

ಜೋ ರೂಟ್ ಇಂಗ್ಲೆಂಡ್ ತಂಡದ ಟೆಸ್ಟ್ ನಾಯಕತ್ವ ತೊರೆದ ಬಳಿಕ ಹೊಸ ನಾಯಕನ ಹುಡುಕಾಟದಲ್ಲಿ ರುವ ಇಂಗ್ಲೆಂಡ್ ತಂಡದಲ್ಲಿರುವ ಆಲ್‍ರೌಂಡರ್ ಬೆನ್ ಸ್ಟೋಕ್ಸ್‌ಗೆ ನಾಯಕನ ಪಟ್ಟ ಕಟ್ಟುವ ಕೂಗು ಕೇಳಿಬರುತ್ತಿದೆ.

5 ವರ್ಷಗಳ ಕಾಲ ಇಂಗ್ಲೆಂಡ್ ಟೆಸ್ಟ್ ತಂಡವನ್ನು ನಾಯಕನಾಗಿ ಮುನ್ನಡೆಸಿದ ಜೋ ರೂಟ್ ನಿನ್ನೆ ನಾಯಕತ್ವಕ್ಕೆ ಗುಡ್ ಬೈ ಹೇಳಿದರು.

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನೂತನ ನಾಯಕನನ್ನು ನೇಮಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ.

ಈ ನಡುವೆ ತಂಡದಲ್ಲಿರುವ ಆಲ್‍ರೌಂಡರ್ ಬೆನ್ ಸ್ಟೋಕ್ಸ್‌ರನ್ನು ನಾಯಕನ್ನಾಗಿ ನೇಮಿಸಬೇಕೆಂಬ ಅಭಿಪ್ರಾಯವನ್ನು ಮಾಜಿ ಆಟಗಾರರು ವ್ಯಕ್ತಪಡಿಸಿದ್ದಾರೆ.

ಬೆನ್ ಸ್ಟೋಕ್ಸ್ ಹೊರತು ಪಡಿಸಿ ಇಂಗ್ಲೆಂಡ್ ತಂಡದಲ್ಲಿರುವ ಹಿರಿಯ ಆಟಗಾರ ಸ್ಟುವರ್ಟ್ ಬ್ರಾಡ್‍ಗೆ ನಾಯಕತ್ವ ವಹಿಸಬಹುದು ಎಂಬ ಅಭಿಪ್ರಾಯವು ಇದೆ.

ಇದೀಗ ಆಸ್ಟ್ರೇಲಿಯಾ ತಂಡ ವೇಗಿ ಪ್ಯಾಟ್ ಕಮ್ಮಿನ್ಸ್‌ಗೆ ನಾಯಕತ್ವ ವಹಿಸಿಕೊಟ್ಟು ಯಶಸ್ವಿಯಾಗಿದೆ. ಹಾಗಾಗಿ ಇಂಗ್ಲೆಂಡ್ ತಂಡ ಕೂಡ ಬೌಲರ್‌ಗೆ ನಾಯಕತ್ವವನ್ನು ವಹಿಸಿ ಪ್ರಯೋಗ ನಡೆಸಲು ಮನಸು ಮಾಡಿದೆ.

Copyright © All rights reserved Newsnap | Newsever by AF themes.
error: Content is protected !!