ಇದೀಗ ಪುಟ್ಟರಾಜು ಅವರೇ ಅಂತಿಮವಾಗಿ ಅಭ್ಯರ್ಥಿಯಾಗಲಿದ್ದಾರೆ ಎಂದು ಚರ್ಚೆಯಾಗುತ್ತಿದೆ.
ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು ಬಹುತೇಕ ಖಚಿತಗೊಂಡಿದೆ, ಅಧಿಕೃತ ಘೋಷಣೆಯೊಂದೇ ಬಾಕಿ.
ಬಿಜೆಪಿ ಟಿಕೆಟ್‌ಗಾಗಿ ಸಂಸದೆ ಸುಮಲತಾ ಅವರು ಪಟ್ಟು ಹಿಡಿದಿದ್ದ ಕಾರಣ ಇಲ್ಲಿಯವರೆಗೂ ಮೈತ್ರಿ ಅಭ್ಯರ್ಥಿ ಆಯ್ಕೆ ವಿಷಯ ಕಗ್ಗಂಟಾಗಿ ಉಳಿದಿತ್ತು.
ಇದೀಗ ಜೆಡಿಎಸ್ ಮುಖಂಡರು ಸಿ.ಎಸ್.ಪುಟ್ಟರಾಜು ರವರ ಹೆಸರು ಘೋಷಿಸುವ ಸಾಧ್ಯತೆ ಇದೆ ಎಂದು ತಿಳಿಸುತ್ತಾರೆ.
ಕೆಲ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಎಚ್.ಡಿ.ಕುಮಾರಸ್ವಾಮಿ ಅವರೇ ಬರಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ಎಚ್‌ಡಿಡಿ ಕುಟುಂಬ ಸದಸ್ಯರು ಹಾಸನ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾರಣ ಮಂಡ್ಯದಲ್ಲಿ ಕುಟುಂಬ ಸದಸ್ಯರು ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ.ಲೋಕಸಭಾ ಚುನಾವಣೆ :ಬೀದಿಗಿಳಿದ ಪ್ರತಾಪ್ ಸಿಂಹ ಅಭಿಮಾನಿಗಳು
ಮಂಡ್ಯ ಕ್ಷೇತ್ರ ಜೆಡಿಎಸ್ ಭದ್ರಕೋಟೆಯಾಗಿದ್ದು ಈ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಮುಖಂಡರ ದೊಂಬರಾಟಗಳನ್ನು ಜನರು ನೋಡುತ್ತಿದ್ದು ಸರಿಯಾದ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್ ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು