December 23, 2024

Newsnap Kannada

The World at your finger tips!

BJP , JDS , alliance

ಸುಮಲತಾ ನನ್ನ ಶತ್ರುನಾ ? ಭೇಟಿಯಾದರೆ ತಪ್ಪೇನು? ಎಚ್ ಡಿಕೆ ಪ್ರಶ್ನೆ

Spread the love

ಬೆಂಗಳೂರು : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಈವರೆಗೂ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆಯಾಗಿಲ್ಲ. ಮುಂದೆ ಭೇಟಿ ಮಾಡುವ ಅವಶ್ಯಕತೆ ಬಂದರೆ ಸಂಸದೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು.

ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು‌ ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ? ಇಂತಹವರಿಗೆ ತೊಂದರೆ ಕೊಟ್ಟು ನಿಲ್ಲಬೇಕು ಅಂತಾನೂ ಇದ್ದೀವಾ? ಖಂಡಿತಾ ಇಲ್ಲ. ಈ ಬಗ್ಗೆ ಇನ್ನು ಚರ್ಚೆಯೇ ಆಗಿಲ್ಲ. ಇವೆಲ್ಲಾ ಪ್ರಾರಂಭಿಕ ಹಂತದಲ್ಲಿ ‌ಇದೆ ಎಂದರು .

ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದರು.

ಈ ಬಗ್ಗೆ ಇಂದು ತಮ್ಮ ಹೇಳಿಕೆ ಪುನರುಚ್ಛರಿಸಿದ ಕುಮಾರಸ್ವಾಮಿ ಸುಮಲತಾ ಅವರೇನು ನನ್ನ ಶತ್ರುನಾ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಅವರನ್ನು ಭೇಟಿ ಮಾಡಿದರೆ ತಪ್ಪೇನಿದೆ ಎಂದು ಕೇಳಿದ್ದಾರೆ.

ಲೋಕಸಭೆ ಚುನಾವಣೆಗೆ ನಿಲ್ಲುವ ವಿಚಾರದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ನಾನು ನಿಲ್ಲುವ ತೀರ್ಮಾನ ಎಲ್ಲೂ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದರು.ಬಿಎಂಟಿಸಿ ಬಸ್ ಗಳು ಶುಭ ಸಮಾರಂಭ , ಮದುವೆ ಮತ್ತು ಪ್ರವಾಸಕ್ಕೆ ಬಾಡಿಗೆಗೆ ಸಿಗಲಿದೆ – ವಿವರ

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಗೆದ್ದ ನಂತರ ಸೋಲಿನ ಹತಾಶೆಯಲ್ಲಿ ಜೆಡಿಎಸ್ ದಳಪತಿಗಳು ಹಲವು ಆರೋಪಗಳನ್ನು ಮಾಡುತ್ತಿದ್ದರು. ಕುಮಾರಸ್ವಾಮಿ ಮತ್ತು ಸುಮಲತಾ ನಂತರ ಎಂದಿಗೂ ಪರಸ್ಪರ ಭೇಟಿಯಾಗಿ ಮಾತುಕತೆಯಾಗಿರಲಿಲ್ಲ. ಆದರೆ ಈ ಬಾರಿ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ.

Copyright © All rights reserved Newsnap | Newsever by AF themes.
error: Content is protected !!