ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಾಜಿ ಶಾಸಕರ ಮಗನ ಮನೆ ಮೇಲೆ ಬುಧವಾರ ದಾಳಿ ಮಾಡಿದೆ.
ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಶಂಕೆಯಡಿ ಮಂಗಳೂರು ಹೊರವಲಯದ ಉಳ್ಳಾಲದಲ್ಲಿನ ಮನೆಯ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿರುವುದಾಗಿ ವರದಿಯಾಗಿದೆ.
ಮಾಜಿ ಕಾಂಗ್ರೆಸ್ ಶಾಸಕ ಹಾಗೂ ಸಾಹಿತಿ ಬಿ.ಎಂ.ಇದಿನಬ್ಬ ಅವರ ಪುತ್ರ ಬಾಷಾನ ಮನೆಗೆ ಇಂದು ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಸಿಸ್ (ISIS) ಭಯೋತ್ಪಾದನಾ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತಪಡಿಸಿ ದಾಳಿ ನಡೆಸಿದೆ ಎನ್ನಲಾಗಿದೆ.
ಇದಿನಬ್ಬ ಮೊಮ್ಮಗ ಅನಾಸ್ ಹಾಗೂ ಸೊಸೆ ಮರಿಯಂ ನನ್ನು ವಿಚಾರಣೆ ನಡೆಸುತ್ತಿರುವದಾಗಿ ಮಾಹಿತಿ ಲಭ್ಯವಾಗಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ