ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

Team Newsnap
1 Min Read

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಬುಧವಾರ ಬಂಧಿಸಿದೆ.

ತಮಿಳುನಾಡು ಮೂಲದ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ.

2014ರಲ್ಲಿ ಚೆನ್ನೈನ ಯುಎಸ್ ರಾಯಭಾರ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬೇಕಾಗಿದ್ದ.

ಬುಧವಾರ ಮೈಸೂರಿನ ರಾಜೀವನಗರದಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಮನೆಯಲ್ಲಿ 1 ಡ್ರೋನ್, ಮೊಬೈಲ್, ಲ್ಯಾಪ್‌ಟಾಪ್, ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ

ಕೊಲಂಬೋದಲ್ಲಿ ಇರುವ ಪಾಕಿಸ್ತಾನಿ ಹೈಕಮೀಷನ್ ಕಚೇರಿನಲ್ಲಿ ಉದ್ಯೋಗಿ ಜತೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರ, ಪಾಕಿಸ್ತಾನಿ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿಯ ಆಣತಿ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ. ಪಾಕಿಸ್ತಾನಿ ಬೇಹುಗಾರರಿಗೆ ನೂರುದ್ದೀನ್ ಹಣ ಸಹಾಯ ಮಾಡುತ್ತಿದ್ದ.

ಈ ಹಿಂದೆ ಹೈದರಾಬಾದ್ ಬೇಹುಗಾರಿಕಾ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ನೂರುದ್ದೀನ್, 2023ರ ಆಗಸ್ಟ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ನಂತರ ಚೆನ್ನೈನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಗೈರಾಗಿದ್ದ. ಆದರಿಂದ ನೂರುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಸಹ ಜಾರಿಯಾಗಿತ್ತು.ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ 

ಇತನ ಸುಳಿವು ನೀಡಿದವರಿಗೆ 5 ಲಕ್ಷ ರೂ.ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿತ್ತು.

Share This Article
Leave a comment