ಪಿಎಸ್‌ಎಲ್‌ವಿ–ಸಿ49 ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಾಗೂ ಈ ಯೋಜನೆಯಲ್ಲಿ ಭಾಗಿಯಾದ ಎಲ್ಲಾ ವಿಜ್ಞಾನಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಪಿಎಸ್‌ಎಲ್‌ವಿಸಿ49/ಇಒಎಸ್–01 ಮಿಶನ್‌ನ ಯಶಸ್ವಿ ಉಡಾವಣೆ ಸಲುವಾಗಿ ಇಸ್ರೋ ಹಾಗೂ ಭಾರತೀಯ ಬಾಹ್ಯಾಕಾಶ ವಲಯವನ್ನು ನಾನು ಅಭಿನಂದಿಸುತ್ತೇನೆ. ಕೋವಿಡ್–19 ಸಂದರ್ಭದಲ್ಲಿ ನಮ್ಮ ವಿಜ್ಞಾನಿಗಳು ಗಡುವನ್ನು ತಲುಪಲು ಅನೇಕ ಸವಾಲುಗಳನ್ನು ಜಯಿಸಿದ್ದಾರೆ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
‘ಅಮೆರಿಕ ಹಾಗೂ ಲುಕ್ಸಂಬರ್ಗ್‌ನ ತಲಾ ನಾಲ್ಕು ಮತ್ತು ಲುಥುವೇನಿಯಾದ 1 ಸೇರಿ ಒಟ್ಟು 9 ಉಪಗ್ರಹಗಳನ್ನೂ ಉಡಾವಣೆ ಮಾಡಲಾಗಿದೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಮಧ್ಯಾಹ್ನ ಪಿಎಸ್ಎಲ್ ವಿ ಸಿ49 ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (ಎಸ್ ಡಿಎಸ್ ಸಿ) ಎಸ್ ಆರ್ ಎಚ್ ಆರ್ ನಿಂದ 9 ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಭಾರತದ ಧ್ರುವ ಉಪಗ್ರಹ ಉಡಾವಣಾ ವಾಹಕವು ತನ್ನ 51ನೇ ಮಿಷನ್ (ಪಿಎಸ್ ಎಲ್ ವಿ-ಸಿ49) ಇಓಎಸ್-01 ಅನ್ನು ಪ್ರಾಥಮಿಕ ಉಪಗ್ರಹವಾಗಿ ಉಡಾವಣೆ ಮಾಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ 2020ರ ನವೆಂಬರ್ 7ರಂದು ಉಡಾವಣೆಯನ್ನು ತಾತ್ಕಾಲಿಕವಾಗಿ 1502 Hrs IST ನಲ್ಲಿ ನಿಗದಿಮಾಡಲಾಗಿದೆ’ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಭಾರತದ ಪಿಎಸ್ ಎಲ್ ವಿ-ಸಿ49 ಹಯು EOS-01 ಅನ್ನ ಪ್ರಾಥಮಿಕ ಉಪ ಗ್ರಹವಾಗಿ ಒಂಬತ್ತು ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಉಡಾವಣೆ ಮಾಡಿದೆ.
ಕೊರೋನಾ ಕಾರಣದಿಂದ ಕಳೆದ ಕೆಲ ತಿಂಗಳುಗಳಿಂದ ಇಸ್ರೋದ ಅಂತರಿಕ್ಷ ಕಾರ್ಯಕ್ರಮಗಳು ಸ್ಥಗಿತವಾಗಿತ್ತು. ಇದೀಗ ಭೂ ವೀಕ್ಷಣಾ ಉಪಗ್ರಹ ಇಒಎಸ್-01ನ ಉಡಾವಣೆ ಮೂಲಕ ಮತ್ತೆ ಇಸ್ರೋ ಅಂತರಿಕ್ಷ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ.
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ