Main News

ಉಪಗ್ರಹ ಯಶಸ್ವಿ ಉಡಾವಣೆ: ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೆಚ್ಚುಗೆ

ಪಿಎಸ್‌ಎಲ್‌ವಿ–ಸಿ49 ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಾಗೂ ಈ ಯೋಜನೆಯಲ್ಲಿ ಭಾಗಿಯಾದ ಎಲ್ಲಾ ವಿಜ್ಞಾನಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಪಿಎಸ್‌ಎಲ್‌ವಿಸಿ49/ಇಒಎಸ್‌–01 ಮಿಶನ್‌ನ ಯಶಸ್ವಿ ಉಡಾವಣೆ ಸಲುವಾಗಿ ಇಸ್ರೋ ಹಾಗೂ ಭಾರತೀಯ ಬಾಹ್ಯಾಕಾಶ ವಲಯವನ್ನು ನಾನು ಅಭಿನಂದಿಸುತ್ತೇನೆ. ಕೋವಿಡ್‌–19 ಸಂದರ್ಭದಲ್ಲಿ ನಮ್ಮ ವಿಜ್ಞಾನಿಗಳು ಗಡುವನ್ನು ತಲುಪಲು ಅನೇಕ ಸವಾಲುಗಳನ್ನು ಜಯಿಸಿದ್ದಾರೆ’ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

‘ಅಮೆರಿಕ ಹಾಗೂ ಲುಕ್ಸಂಬರ್ಗ್‌ನ ತಲಾ ನಾಲ್ಕು ಮತ್ತು ಲುಥುವೇನಿಯಾದ 1 ಸೇರಿ ಒಟ್ಟು 9 ಉಪಗ್ರಹಗಳನ್ನೂ ಉಡಾವಣೆ ಮಾಡಲಾಗಿದೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಮಧ್ಯಾಹ್ನ ಪಿಎಸ್ಎಲ್ ವಿ ಸಿ49 ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. 

ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (ಎಸ್ ಡಿಎಸ್ ಸಿ) ಎಸ್ ಆರ್ ಎಚ್ ಆರ್ ನಿಂದ 9 ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಭಾರತದ ಧ್ರುವ ಉಪಗ್ರಹ ಉಡಾವಣಾ ವಾಹಕವು ತನ್ನ 51ನೇ ಮಿಷನ್ (ಪಿಎಸ್ ಎಲ್ ವಿ-ಸಿ49) ಇಓಎಸ್-01 ಅನ್ನು ಪ್ರಾಥಮಿಕ ಉಪಗ್ರಹವಾಗಿ  ಉಡಾವಣೆ ಮಾಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ 2020ರ ನವೆಂಬರ್ 7ರಂದು ಉಡಾವಣೆಯನ್ನು ತಾತ್ಕಾಲಿಕವಾಗಿ 1502 Hrs IST ನಲ್ಲಿ ನಿಗದಿಮಾಡಲಾಗಿದೆ’ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಭಾರತದ ಪಿಎಸ್ ಎಲ್ ವಿ-ಸಿ49 ಹಯು EOS-01 ಅನ್ನ ಪ್ರಾಥಮಿಕ ಉಪ ಗ್ರಹವಾಗಿ  ಒಂಬತ್ತು ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಉಡಾವಣೆ ಮಾಡಿದೆ.

ಕೊರೋನಾ ಕಾರಣದಿಂದ ಕಳೆದ ಕೆಲ ತಿಂಗಳುಗಳಿಂದ ಇಸ್ರೋದ ಅಂತರಿಕ್ಷ ಕಾರ್ಯಕ್ರಮಗಳು ಸ್ಥಗಿತವಾಗಿತ್ತು. ಇದೀಗ ಭೂ ವೀಕ್ಷಣಾ ಉಪಗ್ರಹ ಇಒಎಸ್-01ನ ಉಡಾವಣೆ ಮೂಲಕ ಮತ್ತೆ ಇಸ್ರೋ ಅಂತರಿಕ್ಷ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ.

Team Newsnap
Leave a Comment
Share
Published by
Team Newsnap
Tags: indiaROCKET

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024