ವಿಶ್ವವಿಖ್ಯಾತ ದಸರಾ ಉತ್ಸವವನ್ನು ಸರ್ಕಾರವು ನಡೆಸಲೇಬೇಕು ಎಂದು ಆಗ್ರಹಿಸಿ ಮೈಸೂರು ನಗರದ ಆರ್ ಗೇಟ್ ವೃತ್ತದಲ್ಲಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಜಂಬೂ ಸವಾರಿ ದಿನ ನಾವು ಸಾರೋಟಿನಲ್ಲಿ ತಾಯಿ ಚಾಮುಂಡೇಶ್ವರಿ ಪ್ರತಿಮೆಯಿಟ್ಟು ಮೆರವಣಿಗೆ ಮಾಡುತ್ತೇವೆ ಎಂದರು.
ಈಗ ಮೈಸೂರು ದಸರಾ ಹೋಗಿ, ಯಡಿಯೂರಪ್ಪ ದಸರಾ ಆಗಿದೆ. ಸಿಎಂ ಯಡಿಯೂರಪ್ಪ ಅವರಿಗೆ ನಮ್ಮ ಸಾಂಸ್ಕೃತಿಕ ದಸರಾ ಬೇಕಾಗಿಲ್ಲ. ಅವರಿಗೆ ನಗುವುದೇ ಗೊತ್ತಿಲ್ಲ, ಒಂದು ವರ್ಷಕ್ಕೊಮ್ಮೆ ನಗುತ್ತಾರೆ. ಪಕ್ಷಾಂತರ ಪಿತಾಮಹ ಯಡಿಯೂರಪ್ಪ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಯಡಿಯೂರಪ್ಪಗೆ ಕೇವಲ ಸರ್ಕಾರ ಉಳಿಸಿಕೊಳ್ಳುವುದು, ಮಂತ್ರಿಗಿರಿ ಹಂಚುವುದು ಇದಿಷ್ಟೇ ಗೊತ್ತಿರೋದು. ವಿದ್ಯಾಗಮವನ್ನು ಶಾಶ್ವತವಾಗಿ ಬಂದ್ ಮಾಡಬೇಕು. ಇಲ್ಲದಿದ್ದರೆ ಕರ್ನಾಟಕ ಬಂದ್ ಮಾಡಲಾಗುವುದು.
ಕೊರೊನಾದಿಂದ ಶಿಕ್ಷಕರು ಸತ್ತರೆ ಒಂದು ಕೋಟಿ ರೂ. ಪರಿಹಾರ ಕೊಡಬೇಕು. ವಿದ್ಯಾರ್ಥಿಗಳು ಸತ್ತರೂ ಒಂದು ಕೋಟಿ ರೂ. ಪರಿಹಾರ ಕೊಡಬೇಕು. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಆಗ್ರಹಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು