ನನ್ನ ಮಗ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ಆಗುವುದು ನಿಜ ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಸ್ಪಷ್ಟ ಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನಿಗೆ 45 ವರ್ಷ ಆಗಿದೆ. ಅವರ ದಾರಿ ಅವರು ಹುಡುಕಿಕೊಂಡು ಹೋಗುತ್ತಾರೆ. ನನಗೆ 75 ವರ್ಷ ಆಗಿದೆ. ಈಗಲೂ ನನ್ನ ಮಾತು ಕೇಳು ಅಂದರೆ ಆಗುತ್ತಾ, ಮಕ್ಕಳಿಗೆ ಸ್ವಾತಂತ್ರ್ಯ ಕೊಡಲಿಲ್ಲ ಅಂದರೆ ಹೇಗೆ, ಅವನ ದಾರಿ ಅವನು ಹುಡುಕಿಕೊಂಡು ಹೋಗಿದ್ದಾರೆ. ಅದಕ್ಕೆ ನಾನೇನು ಮಾಡಲು ಸಾಧ್ಯವಿಲ್ಲ ಎಂದರು.
ಕುಟುಂಬ ರಾಜಕಾರಣಕ್ಕೆ ವಿರೋಧ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಕ್ಕಳು, ಸೊಸೆ, ಮೊಮ್ಮಕ್ಕಳು ಎಲ್ಲರೂ ಇಲ್ಲವೇ. ಅದರ ಬಗ್ಗೆ ಯಾಕೆ ಯಾರು ಕೇಳುವುದಿಲ್ಲ. ಮಗ ಕಾಂಗ್ರೆಸ್‍ಗೆ ಹೋಗೋದು ಬೇರೆ, ನಾನು ಕಾಂಗ್ರೆಸ್ ನಡುವಳಿಕೆ ಟೀಕೆ ಮಾಡೋದು ಬೇರೆ. ನಾವು ಸುಡಗಾಡು ಸಿದ್ಧರು ಇದ್ದ ಹಾಗೆ. ಎಲ್ಲವನ್ನು ಹೇಳುತ್ತೇವೆ. ಕಾಂಗ್ರೆಸ್ ಆಗಿರಲಿ ಬಿಜೆಪಿ ಆಗಿರಲಿ ಎಲ್ಲದರ ನಡುವಳಿಕೆಗಳನ್ನು ಟೀಕೆ ಮಾಡುತ್ತೇವೆ. ಅದು ಬೇರೆ ಆತ ಕಾಂಗ್ರೆಸ್‍ಗೆ ಸೇರೋದು ಬೇರೆ ಎಂದು ತಿಳಿಸಿದರು.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ