February 18, 2026

Newsnap Kannada

The World at your finger tips!

IT,raid,assets

ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳ ದಾಳಿ: ಬೆಂಗಳೂರು, ಮೈಸೂರು ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ

Spread the love

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಅಚಾನಕ್ ದಾಳಿ ನಡೆಸಿದ್ದು, ಉದ್ಯಮಿಗಳು ಹಾಗೂ ಬಿಲ್ಡರ್‌ಗಳಿಗೆ ಶಾಕ್ ನೀಡಿದ್ದಾರೆ.

ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ 30ಕ್ಕೂ ಹೆಚ್ಚು ಕಡೆಗಳಲ್ಲಿ ಈ ದಾಳಿ ನಡೆದಿದ್ದು, ಭ್ರಷ್ಟಾಚಾರ ಮತ್ತು ತೆರಿಗೆ ವಂಚನೆ ಸಂಬಂಧ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಆರ್.ಟಿ. ನಗರ, ಇಳವಾಲ, ರಾಮಕೃಷ್ಣ ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಉದ್ಯಮಿಗಳು, ಬಿಲ್ಡರ್‌ಗಳ ಮನೆ, ಕಚೇರಿ, ಕಲ್ಯಾಣ ಮಂಟಪ ಸೇರಿದಂತೆ ಹಲವು ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ, ಚೆನ್ನೈ, ಗೋವಾ, ಕೋಲ್ಕತ್ತಾ ಸೇರಿದಂತೆ ಇತರ ರಾಜ್ಯಗಳಿಂದ ಬಂದಿರುವ ಐಟಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಬೆಳಗ್ಗೆ 5 ಗಂಟೆಯಿಂದಲೇ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದೆ.ಇದನ್ನು ಓದಿ –ನಾಳೆ UGC ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಭೆ

ಆದಾಯ ತೆರಿಗೆ ವಂಚನೆ ವಿರುದ್ಧದ ಕಾನೂನು ಕ್ರಮದ ಭಾಗವಾಗಿ ಈ ದಾಳಿ ನಡೆದಿದ್ದು, ಸಂಬಂಧಿತ ದಾಖಲೆಗಳ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

error: Content is protected !!