ಬೆಂಗಳೂರು , ಮೈಸೂರಿನ ಫೈನಾನ್ಸಿಯರ್ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ– 20 ಕೋಟಿ ಹಣ ವಶ

Team Newsnap
1 Min Read
IT raid on Haveri Congress leader Channabasappa's house ಹಾವೇರಿ ಕಾಂಗ್ರೆಸ್ ನಾಯಕ ಚನ್ನಬಸಪ್ಪನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು – ಮೈಸೂರಿನ ಹಲವು ಸ್ಥಳಗಳಲ್ಲಿ ಆದಾಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಸುಮಾರು 20 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.

ವಿಧಾನಸಭಾ ಚುನಾವಣಾಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡುವ ಫೈನಾನ್ಸಿಯರ್‌ಗಳ ಮನೆ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಕೆಲವು ಫೈನಾನ್ಸಿಯರ್‌ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.

ಬೆಂಗಳೂರಿನ ಶಾಂತಿನಗರ, ಕಾಕ್ಸ ಟೌನ್ , ಶಿವಾಜಿನಗರ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆದಿದೆ.

WhatsApp Image 2023 05 06 at 4.45.57 PM

ಶುಕ್ರವಾರ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ತನಿಖೆ ಕೈಗೊಂಡಿದ್ದಾರೆ.ಇದನ್ನು ಓದಿ –ಮೋದಿ ‘ರೋಡ್ ಶೋ’ ನಲ್ಲಿ ಗಮನ ಸೆಳೆದ ಭಜರಂಗಿ

ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದೆ, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

Share This Article
Leave a comment