June 9, 2023

Newsnap Kannada

The World at your finger tips!

Rain , storm , yellow alert

Yellow alert in Bengaluru and some part of state ಇಂದು ರಾಜಧಾನಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಮುಂದಿನ 4 ದಿನ ಮಳೆ-ಕೆಲವು ಜಿಲ್ಲೆಗಳಲ್ಲಿ ‘ಯೆಲ್ಲೋ-ಆರೆಂಜ್ ಅಲರ್ಟ್’

Spread the love

ಇಂದಿನಿಂದ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್ 3, 4 ರಂದು ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರ ತನಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಧಾರವಾಡ, ಗದಗ, ಬಳ್ಳಾರಿ ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4 ರವರೆಗೆ ಮಳೆಯಾಗಲಿದೆ.ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!