ಬೆಂಗಳೂರು – ಸಿಎಂ ಸಿದ್ದರಾಮಯ್ಯ ಸೋಮವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಸತತ ಏಳು ಗಂಟೆಗಳ ಕಾಲ ಜನತಾ ದರ್ಶನ ನಡೆಸಿ, ಜನರ ಸಮಸ್ಯೆಗಳನ್ನು ಆಲಿಸಿದರು.
ಈ ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಇವುಗಳ ಇತ್ಯರ್ಥಕ್ಕೆ ಸಿಎಂ ಸಿದ್ದರಾಮಯ್ಯ 15 ದಿನ ಗಡುವು ನೀಡಿದರು.
ಜನಸ್ಪಂದನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ಜನತಾ ದರ್ಶನ ಅಲ್ಲ. ಜನಸ್ಪಂದನ ಕಾರ್ಯಕ್ರಮ. ಇಂದು 3,500 ಅರ್ಜಿಗಳು ಬಂದಿವೆ. ಇನ್ನೂ ಜನರು ಬರುತ್ತಿದ್ದಾರೆ. ಎಲ್ಲಾ ಅರ್ಜಿಗಳನ್ನು ಸ್ವೀಕರಿಸಿ ತಕ್ಷಣ ಪರಿಹಾರ ಕೊಡಬೇಕು. ಮುಂದಿನ 15 ದಿನಗಳಲ್ಲಿ ಈ ಎಲ್ಲಾ ಅರ್ಜಿಗಳ ಇತ್ಯರ್ಥ ಆಗಬೇಕು. ಮತ್ತೆ ಜನಸ್ಪಂದನ ಮಾಡಿದಾಗ ಇಷ್ಟು ಅರ್ಜಿ ಬರಬಾರದು ಎಂದರು.
ನಾನು ಬೆಳಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನು ಓದು – ಎಲ್.ಕೆ. ಅತೀಕ್ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ
ಇಂದಿನ ಜನಸ್ಪಂದನಕ್ಕೆ ಉದ್ಯೋಗ ಬೇಡಿಕೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದು, ಸಾಧ್ಯವಾದ ಕಡೆಗಳಲ್ಲಿ ಉದ್ಯೋಗ ಹಾಗೂ ಮಾಸಾಶನ ಒದಗಿಸಲು ಸೂಚನೆ ನೀಡಲಾಗಿದೆ. ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆ.
ಮೂರು ತಿಂಗಳ ನಂತರ ಮತ್ತೊಮ್ಮೆ ಜನಸ್ಪಂದನ ನಡೆಸಲಾಗುವುದು. ಆಗ ಈ ಪ್ರಮಾಣದಲ್ಲಿ ಜನರು ತಮ್ಮ ಸಮಸ್ಯೆಗಳೊಂದಿಗೆ ಬರದಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ ಎಂದರು. ಇದನ್ನು ಓದು – ಐಟಿ ದಾಳಿಗೆ ಒಳಗಾಗಿದ್ದ ಕೋಟಿವೀರ ಅಂಬಿಕಾಪತಿ ಹೃದಯಾಘಾತದಿಂದ ನಿಧನ
ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಆರೋಗ್ಯ ಸಮಸ್ಯೆಯಿಂದಾಗಿ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಿದ್ದೇನೆ ಎಂದರು
ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು. ಸಮಸ್ಯೆ ಬಗೆಹರಿಸದೆ ಇದ್ದರೆ ದೊಡ್ಡದಾಗುತ್ತಲೇ ಹೋಗುತ್ತದೆ. ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿದೆ. ಅನೇಕ ಜನರು ಕೆಲಸ ಕೊಡಿಸಿ ಅಂತಾ ಕೇಳಿದ್ದಾರೆ. ವಿಕಲಚೇತನರಿಗೆ 4 ಸಾವಿರ ತ್ರಿಚಕ್ರ ವಾಹನ ನೀಡಲು ಸೂಚಿಸಿದ್ದೇನೆ ಎಂದರು.
ಜನತಾ ದರ್ಶನ ಅಲ್ಲ – ಇದು ಜನ ಸ್ಪಂದನ : ಯಶಸ್ವಿ ಕಾರ್ಯಕ್ರಮ – ಸಿಎಂ- janata Darshan – It’s Jana Spandana : A successful program – CM
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ