ಜಡೇಜಾ ಮ್ಯಾಜಿಕ್ – 5ನೇ ಬಾರಿ CSK ಮುಡಿಗೆ IPL ಕಿರೀಟ

Team Newsnap
4 Min Read

ಜಡೇಜಾ ಮ್ಯಾಜಿಕ್ – ಕೊನೆಯ ಥ್ರಿಲ್ಲರ್ ಓವರ್ ನಲ್ಲಿ ಭರ್ಜರಿ ಸಿಕ್ಸರ್‌, ಬೌಂಡರಿ ಸಿಡಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಭರ್ಜರಿ ಜಯ ನೀಡಿದ್ದಾರೆ, 2023ರ ಟಾಟಾ ಐಪಿಎಲ್‌ ಚಾಂಪಿಯನ್‌ ಕಿರೀಟ CSK ಮುಡಿಗೇರಿಸಿಕೊಂಡಿದೆ.

ಎಂ.ಎಸ್‌. ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಬಲಿಷ್ಠ ಗುಜರಾತ್‌ ಟೈಟಾನ್ಸ್‌ ವಿರುದ್ಧ ಗೆಲ್ಲುವ ಮೂಲಕ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇದರೊಂದಿಗೆ 5 ಬಾರಿ ಐಪಿಎಲ್‌ ಕಪ್‌ ಗೆದ್ದ ಮುಂಬೈ ಇಂಡಿಯನ್ಸ್‌ ದಾಖಲೆಯನ್ನ ಸರಿಗಟ್ಟಿದೆ. ವಿಶೇಷವೆಂದರೆ ಚೆನ್ನೈ ತಂಡದಲ್ಲಿ ಸ್ಟಾರ್‌ ಆಟಗಾರನಾಗಿ ಮಿಂಚಿದ್ದ ಅಂಬಾಟಿ ರಾಯುಡು ಗೆಲುವಿನೊಂದಿಗೆ ಐಪಿಎಲ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. 250 ಪಂದ್ಯವನ್ನಾಡಿದ ಸಾಧನೆ ಮಾಡಿದ ಎಂ.ಎಸ್‌ ಧೋನಿ ಸಹ ಇದೇ ಗೆಲುವಿನೊಂದಿಗೆ ವಿದಾಯ ಹೇಳುವ ಸಾಧ್ಯತೆಗಳಿವೆ.

ಪಂದ್ಯದ ಸಾರಾಂಶ

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 214 ರನ್‌ ಗಳಿಸಿತ್ತು. ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಮೂರು ಎಸೆತಗಳನ್ನು ಎದುರಿಸುತ್ತಿದ್ದಂತೆ ಮಳೆಯಿಂದ ಪಂದ್ಯ ತಡವಾಯಿತು.

ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ ಜೊತೆಯಾಟಕ್ಕೆ 42 ಎಸೆತಗಳಲ್ಲಿ 67 ರನ್‌ ಗಳಿಸಿತ್ತು. 2ನೇ ಓವರ್‌ನಲ್ಲೇ ಕ್ಯಾಚ್‌ ನಿಂದ ತಪ್ಪಿಸಿಕೊಂಡಿದ್ದ ಗಿಲ್‌ ಧೋನಿ ಮ್ಯಾಜಿಕ್‌ ಸ್ಟಂಪ್‌ಗೆ ವಿಕೆಟ್‌ ಒಪ್ಪಿಸಲೇಬೇಕಾಯಿತು.

ಮಿಂಚಿದ ಸಾಯಿ ಸುದರ್ಶನ್‌

ಸಾಯಿ ಸುದರ್ಶನ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ 42 ಎಸೆತಗಳಲ್ಲಿ 64 ರನ್‌ ಜೊತೆಯಾಟ ನೀಡಿದರು, ಸುದರ್ಶನ್‌ ಹಾಗೂ ಹಾರ್ದಿಕ್‌ ಪಾಂಡ್ಯ ಜೋಡಿ 33 ಎಸೆತಗಳಲ್ಲೇ ಸ್ಫೋಟಕ 81 ರನ್ ಗಳ ಜೊತೆಯಾಟ ಆಡಿದರು. ಮೊದಲ 10 ಓವರ್‌ನಲ್ಲಿ ಒಂದು ವಿಕೆಟ್‌ ಕಳೆದುಕೊಂಡು ಕೇವಲ 86 ರನ್‌ ಕಲೆಹಾಕಿದ್ದ ಟೈಟಾನ್ಸ್‌ ಮುಂದಿನ 10 ಓವರ್‌ಗಳಲ್ಲಿ 128 ರನ್‌ ಗಳಿಸುವ ಮೂಲಕ ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು. ಸಾಯಿ ಸುದರ್ಶನ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಕೊನೆಯ 5 ಓವರ್‌ಗಳಲ್ಲಿ 71 ರನ್‌ ಸೇರ್ಪಡೆಯಾಯಿತು.

ಡಕ್ವರ್ತ್‌ ಲೂಯಿಸ್ (DLS) ನಿಯಮ ಅನ್ವಯಿಸಿ, ಓವರ್‌ಗಳನ್ನ ಕಡಿತಗೊಳಿಸಲಾಯಿತು. ಡಕ್ವರ್ತ್‌ ಲೂಯಿಸ್‌ ನಿಯಮದ ಪ್ರಕಾರ 15 ಓವರ್‌ಗಳಲ್ಲಿ 171 ರನ್‌ ಟಾರ್ಗೆಟ್‌ ಪಡೆದು ಇನ್ನಿಂಗ್ಸ್‌ ಆರಂಭಿಸಿದ ಸಿಎಸ್‌ಕೆ 15 ಓವರ್‌ಗಳಲ್ಲಿ 171 ರನ್‌ ಚಚ್ಚುವ ಮೂಲಕ ಗೆಲುವು ಸಾಧಿಸಿತು. ಭೀಕರ ಅಪಘಾತ ಪ್ರಕರಣ: ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ – CM ಸಿದ್ದರಾಮಯ್ಯ ಘೋಷಣೆ

ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್‌ ಗಾಯಕ್ವಾಡ್‌ ಹಾಗೂ ಡಿವೋನ್‌ ಕಾನ್ವೆ ಆರಂಭದಿಂದಲೇ ಗುಜರಾತ್‌ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿತು. ಮೊದಲ ವಿಕೆಟ್‌ಕೆ ಈ ಜೋಡಿ 6.3 ಓವರ್‌ಗಳಲ್ಲಿ ಭರ್ಜರಿ 74 ರನ್‌ ಸಿಡಿಸಿತ್ತು. ಈ ವೇಳೆ ಋತುರಾಜ್‌ ಗಾಯಕ್ವಾಡ್‌ ದೊಡ್ಡ ಹೊಡೆತ ಹೊಡೆಯಲು ಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಋತುರಾಜ್‌ 16 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್‌ನೊಂದಿಗೆ 26 ರನ್‌ ಗಳಿಸಿ ಪೆವಿಲಿಯನ್‌ ಸೇರುತ್ತಿದ್ದಂತೆ ಡಿವೋನ್‌ ಕಾನ್ವೆ ಸಹ 47 ರನ್‌ (25 ಎಸೆತ, 4 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. ನಂತರದಲ್ಲಿ ಕಣಕ್ಕಿಳಿದ ಅಜಿಂಕ್ಯಾ ರಹಾನೆ 13 ಎಸೆತಗಳಲ್ಲಿ ಸ್ಫೋಟಕ 27 ರನ್‌ (2 ಸಿಕ್ಸರ್‌, 2 ಬೌಂಡರಿ) ಚಚ್ಚಿ ಔಟಾದರು. ಅಂಬಾಟಿ ರಾಯುಡು 19 ರನ್‌ (8 ಎಸೆತ, 2 ಸಿಕ್ಸರ್‌, 1 ಬೌಂಡರಿ) ಚಚ್ಚಿದರು.‌ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿವಂ ದುಬೆ ಅಜೇಯ 32 ರನ್‌ (21 ಎಸೆತ, 2 ಸಿಕ್ಸ್‌), ರವೀಂದ್ರ ಜಡೇಜಾ 15 ರನ್‌ (6‌ ಎಸೆತ, 1 ಸಿಕ್ಸ್‌, 1 ಬೌಂಡರಿ) ಗಳಿಸಿ ಕ್ರೀಸ್‌ನಲ್ಲಿ ಉಳಿದರು.

IPL 2023 CSK

ಜಡೇಜಾ ಜಾದು

ಕೊನೆಯ 20 ಎಸೆತಗಳಲ್ಲಿ 50 ರನ್‌ಗಳ ಅಗತ್ಯವಿತ್ತು. ಈ ವೇಳೆ ರಶೀದ್‌ ಖಾನ್‌ ಬೌಲಿಂಗ್‌ನ ಕೊನೆಯ ಎರಡು ಎಸೆತಗಳನ್ನು ಶಿವಂ ದುಬೆ ಭರ್ಜರಿ ಸಿಕ್ಸರ್‌ ಬಾರಿಸಿದರು. ಇನ್ನೂ ಕೊನೆಯ 18 ಎಸೆತಗಳಲ್ಲಿ 38 ರನ್‌ಗಳು ಬೇಕಾಗಿದ್ದಾಗ ಕೊನೆಯ ಐಪಿಎಲ್‌ ಪಂದ್ಯವಾಡಿದ ಅಂಬಾಟಿ ರಾಯುಡು ಮೋಹಿತ್‌ ಶರ್ಮಾ ಬೌಲಿಂಗ್‌ನ ಮೊದಲ ಮೂರು ಎಸೆತಗಳಲ್ಲಿ ಅಂಬಾಟಿ ರಾಯುಡು 2 ಸಿಕ್ಸರ್‌, 1 ಬೌಂಡರಿ ಬಾರಿಸಿದರು. ಇದರಿಂದ ಕಠಿಣ ಪರಿಸ್ಥಿತಿಯಲ್ಲಿದ್ದ ಚೆನ್ನೈಗೆ ಸಂಜೀವಿನಿ ಸಿಕ್ಕಂತಾಯಿತು. ಕೊನೆಯ 6 ಎಸೆತಗಳಲ್ಲಿ 13 ರನ್‌ ಅಗತ್ಯವಿದ್ದಾಗ ಮತ್ತೆ ಮೋಹಿತ್‌ ಶರ್ಮಾ ಬೌಲಿಂಗ್‌ನಲ್ಲಿದ್ದರು. ಮೊದಲ 4 ಎಸೆತಗಳಲ್ಲಿ ಕೇವಲ 3 ರನ್‌ ಸೇರ್ಪಡೆಯಾಯಿತು. 5ನೇ ಎಸೆತದಲ್ಲಿ ಸಿಕ್ಸ್‌ ಬಾರಿಸಿದ ಜಡೇಜಾ 6ನೇ ಎಸೆತದಲ್ಲಿ ಬೌಂಡರಿ ಚಚ್ಚುವ ಮೂಲ ಗೆಲುವು ತಂದುಕೊಟ್ಟರು. ಬಿಲ್ ಕಟ್ಟದಿದ್ದರೆ ಕರೆಂಟ್ ಕಟ್ !

ಗುಜರಾತ್‌ ಬ್ಯಾಟಿಂಗ್

ಗುಜರಾತ್‌ ಟೈಟಾನ್ಸ್‌ – 214/4

 • ವೃದ್ಧಿಮಾನ್‌ ಸಾಹಾ – 54 ರನ್‌
 • ಶುಭಮನ್‌ ಗಿಲ್‌ – 39 ರನ್‌
 • ಹಾರ್ದಿಕ್‌ ಪಾಂಡ್ಯ – 21 ರನ್‌
 • ಸಾಯಿ ಸುದರ್ಶನ್‌ – 96 ರನ್‌

ಸಿಎಸ್‌ಕೆ

 • ಮಹೇಶ್‌ ಪತಿರಣ 2 ವಿಕೆಟ್‌
 • ರವೀಂದ್ರ ಜಡೇಜಾ – 1 ವಿಕೆಟ್‌
 • ದೀಪಕ್‌ ಚಹಾರ್‌ – 1 ವಿಕೆಟ್‌

ಸಿಎಸ್‌ಕೆ ಬ್ಯಾಟಿಂಗ್ – 175/5

 • ಕಾನ್ವೇ – 47
 • ಶಿವಂ ದುಬೆ – 32
 • ರಹನೆ – 27

ಗುಜರಾತ್‌ ಟೈಟಾನ್ಸ್‌

 • ಮೋಹಿತ್ ಶರ್ಮಾ 3 ವಿಕೆಟ್
 • ನೂರ್ ಅಹಮದ್ – 2 ವಿಕೆಟ್

Share This Article
Leave a comment