January 8, 2025

Newsnap Kannada

The World at your finger tips!

YADIYURAPPA1

ಬಿಜೆಪಿ ಪಕ್ಷಕ್ಕೆ ಜಗದೀಶ್ ಶೆಟ್ಟರ್ ನಂಬಿಕೆ ದ್ರೋಹ ಮಾಡಿದ್ದಾರೆ : ಬಿ.ಎಸ್. ಯಡಿಯೂರಪ್ಪ 

Spread the love

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನವೊಲಿಕೆ ಯತ್ನ ವಿಫಲವಾಗಿದ್ದು, ಇಂದು ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಈ ಹಿನ್ನೆಲೆ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದರು. ಶೆಟ್ಟರ್ ಅವರು ನಂಬಿಕೆ ದ್ರೋಹ, ವಿಶ್ವಾಸ ದ್ರೋಹ ಮಾಡಿದರು, ಜನರು ಇದನ್ನು ಕ್ಷಮಿಸಲ್ಲ, ಹಳೆ ಬೇರು ಹೊಸ ಚಿಗುರು ಸೇರಿ ಪಕ್ಷವನ್ನ ಬಲಪಡಿಸಬೇಕಾಗಿದೆ.

ಸವದಿಯನ್ನು ಬಿಜೆಪಿಗೆ ತಂದು ಡಿಸಿಎಂ ಮಾಡಿದ್ದೇ, ಸೋತಿದ್ದ ಸವದಿಯನ್ನ ಡಿಸಿಎಂ ಮಾಡಿದೆ. ಆದರೆ ಸವದಿ ಬಿಜೆಪಿ ತೊರೆದರು ಎಂದು ಅಸಮಾಧಾನ ಹೊರಹಾಕಿದರು. ಸವದಿ ಅವರೇ ನಿಮಗೆ ಬಿಜೆಪಿ ಏನು ಅನ್ಯಾಯ ಮಾಡಿದೆ ಎಂದರು.

ಶನಿವಾರ ಸಂಜೆ ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಆದರೆ ವರಿಷ್ಠರಿಂದ ಟಿಕೆಟ್ ಸಿಗುವ ಭರವಸೆ ಸಿಗದ ಕಾರಣ ಆಕ್ರೋಶಗೊಂಡ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಶೆಟ್ಟರ್ ಯೋಚನೆ ಮಾಡಿದ್ದರು. ಆದರೆ ಶೆಟ್ಟರ್ ಪತ್ನಿ ಶಿಲ್ಪಾ ಶೆಟ್ಟರ್ ಪಕ್ಷೇತರರಾಗಿ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಪಕ್ಷೇತರರಾಗಿ ಕಣಕ್ಕಿಳಿದರೆ ಗೆಲ್ಲುವುದು ಬಹಳ ಕಷ್ಟ, ಆದ್ದರಿಂದ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುವಂತೆ ಶೆಟ್ಟರ್ ಗೆ ಅವರ ಪತ್ನಿ ಶಿಲ್ಪಾ ಶೆಟ್ಟರ್ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಶಿರಸಿಗೆ ತೆರಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಳಿಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!