ಹೆರಿಗೆಗಾಗಿ ಬಂದಿದ್ದ ತಾಯಿ, ಮಗು ವೈದ್ಯರ ನಿಲ್ರ್ಯಕ್ಷದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆ ವಿರುದ್ಧ ಮೃತ ಸಂಬಂಧಿಕರು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಿಡಗುರ್ಕಿ ಗ್ರಾಮದ ಅನುಷಾ(24) ಮೃತ ಮಹಿಳೆ. ನಿನ್ನೆ ಸಂಜೆ ಕೋಲಾರ ಹೊರವಲಯದ ಟಮಕ ಬಳಿ ಇರುವ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆಂದು ಅನುಷಾ ದಾಖಲಾಗಿದ್ದಾರೆ.
ಚಿಕಿತ್ಸೆ ಆರಂಭಿಸಿದ ಅರ್.ಎಲ್. ಜಾಲಪ್ಪ ಆಸ್ಪತ್ರೆ ವೈದ್ಯರು, ರಕ್ತ, ಔಷಧ ಎಲ್ಲವನ್ನು ಪಡೆದು ಕೊನೆಗೆ ಮಗು ಮೃತಪಟ್ಟಿದೆ.ಬಳಿಕ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.
ಸರಿಯಾಗಿ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ತೋರಿಸಿದ್ದರಿಂದ ತಾಯಿ, ಮಗು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿ ಆಸ್ಪತ್ರೆ ಮುಂದೆಯೇ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಕೂಡಲೇ ಎಎಸ್ಪಿ ಜಾಹ್ನವಿ ಭೇಟಿ ನೀಡಿ, ಆಸ್ಪತ್ರೆಗೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ