ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ದಿ. ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾದ ಟೀಸರ್ ಅನ್ನು ಫೆ11 ರಂದು ಬಿಡುಗಡೆ ಘೋಷಣೆಮಾಡಿರುವ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಪುನೀತ್ ಅಗಲಿಕೆಗೂ ಮುನ್ನ ಕೊನೆದಾಗಿ ಅಭಿನಯಿಸಿರುವ ಸಿನಿಮಾ ಜೇಮ್ಸ್ ಈ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಇತ್ತೀಚೆಗಷ್ಟೇ ಜೇಮ್ಸ್ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿ ಚಿತ್ರತಂಡ ಭಾರೀ ಸದ್ದು ಮಾಡಿತ್ತು. ಇದೀಗ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಜೇಮ್ಸ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾರಿನ ಮೇಲೆ ಜೆ ಎಂದು ಸಿಂಬಲ್ ಇರುವ ಫೋಟೋವನ್ನು ಶೇರ್ ಮಾಡಿಕೊಂಡಿರುವ ಅಶ್ವಿನಿ ಫೆಬ್ರವರಿ 11 ರಂದು ಬೆಳಿಗ್ಗೆ 11.11 ಕ್ಕೆ ಜೇಮ್ಸ್ ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ಜೇಮ್ಸ್ ಸಿನಿಮಾಕ್ಕೆ ನಟ ಶಿವರಾಜ್ ಕುಮಾರ್ ವಾಯ್ಸ್ ಡಬ್ಬಿಂಗ್ ನೀಡುತ್ತಿದ್ದಾರೆ ಎಂದು ಚಿತ್ರತಂಡ ಬಹಿರಂಗಪಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು