ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅಧಿಕ ರಕ್ತದೊತ್ತಡದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಳೆದ ರಾತ್ರಿ ಬಿಪಿ ಹೆಚ್ಚಾದ ಕಾರಣದಿಂದಾಗಿ ಅವರು ಪ್ರಜ್ಞೆ ತಪ್ಪಿದ್ದರಂತೆ. ಕೂಡಲೇ ಬೆಂಗಳೂರಿನ ಶೇಷಾದ್ರಿ ಪುರಂ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಪಿ ಹೆಚ್ಚಾದ ಜೊತೆಗೆ ಅವರಿಗೆ ಸ್ಟ್ರೋಕ್ ಕೂಡ ಆಗಿದೆ ಎಂದು ಹೇಳಲಾಗುತ್ತಿದೆ.
ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಂತೆ. ನಿನ್ನೆ ರಾತ್ರಿಯೇ ಅವರಿಗೆ ಪಿಬಿ ಹೆಚ್ಚಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಾಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಆಪ್ತರು ತಿಳಿಸಿದ್ದಾರೆ.ಚಿಕಿತ್ಸೆಗೆ ಸ್ಪಂದಿಸುತ್ತಿರುವುದರಿಂದ ಯಾರೂ ಆತಂಕ ಪಡಬೇಕಿಲ್ಲ ಎಂದಿದ್ದಾರೆ.
ಪುನೀತ್ ರಾಜ್ ಕುಮಾರ್ ಸಿನಿಮಾದ ಮೂಲಕ ಕಿಶೋರ್ ಪತ್ತಿಕೊಂಡ, ಮೊದಲ ಸಿನಿಮಾದಲ್ಲೇ ಗೆಲುವು ಕಂಡವರು. ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದರು.
ಒಳ್ಳೆಯ ನಿರ್ಮಾಪಕ ಎಂದೂ ಗುರುತಿಸಿಕೊಂಡಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು