December 26, 2024

Newsnap Kannada

The World at your finger tips!

high court , Masjid , dispute

ಜಾಮಿಯಾ ಮಸೀದಿಯಲ್ಲಿ : ಅಕ್ರಮ ಮದರಸಾ : ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು

Spread the love

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. ಜಾಮಿಯಾ ಮಸೀದಿಯ ಒಳಭಾಗದಲ್ಲಿ ನಡೆಯುತ್ತಿರುವ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಮಂಡ್ಯ ಜಿಲ್ಲಾಡಳಿತಕ್ಕೆ ಗಡುವು ನೀಡಿದೆ.

1934 ರಲ್ಲಿ ಜಾಮಿಯಾ ಮಸೀದಿ ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆಗೆ ಸೇರಿದ್ದು, ಈ ಕಟ್ಟಡದಲ್ಲಿ ಮದರಸಾದಂತಹ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಹೀಗಿದ್ದರೂ ಕೂಡಾ ಜಾಮಿಯಾ ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ನಡೆಸಲಾಗುತ್ತಿದೆ.ಒಂದೇ ದಿನ 17 ಡಿವೈಎಸ್ಪಿ ವರ್ಗಾವಣೆ -ಕರ್ನಾಟಕ ಲೋಕಾಯುಕ್ತಕ್ಕೆ ಮತ್ತಷ್ಟು ಬಲ

ಕಳೆದ ಹಲವು ವರ್ಷಗಳಿಂದ ಹಿಂದೂಪರ ಸಂಘಟನೆಗಳು ಅಕ್ರಮ ಮದರಸಾ ತೆರವು ಮಾಡಬೇಕೆಂದು ಆಗ್ರಹ ಮಾಡುತ್ತಿವೆ. ಇಷ್ಟಾದರೂ ಕೂಡಾ ಕ್ರಮ ಕೈಗೊಳ್ಳದ ಹಿನ್ನೆಲೆ ಹಿಂದೂ ಜಾಗರಣಾ ವೇದಿಕೆ ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆಗೆ ಗಡುವು ನೀಡಿದೆ.

ಐತಿಹಾಸಿಕ ಸ್ಥಳವಾಗಿರುವ ಜಾಮಿಯಾ ಮಸೀದಿ ಅಲ್ಲ, ಅದು ಮಂದಿರ ಎಂದು ಬಜರಂಗಸೇನೆ ಹೈಕೋರ್ಟ್ ಮೆಟ್ಟಿಲೇರುವ ಮೂಲಕ ಕಾನೂನು ಹೋರಾಟವನ್ನು ಆರಂಭಿಸಿದೆ. ಹಿಂದೂ ಜಾಗರಣ ವೇದಿಕೆ ಮಸೀದಿಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದರಸಾ ತೆರವಿಗೆ ಹೋರಾಟವನ್ನು ಆರಂಭಿಸಿದೆ.

ಜಾಮಿಯಾ ಮಸೀದಿಯಲ್ಲಿ ನಡೆಯುತ್ತಿರುವ ಅಕ್ರಮ ಮದರಸಾವನ್ನು 10 ದಿನಗಳ ಒಳಗೆ ತೆರವು ಮಾಡಬೇಕು. ಇಲ್ಲವಾದಲ್ಲಿ ನಮಗೂ ಪ್ರತಿ ಶನಿವಾರ ಹನುಮಾನ್ ಚಾಲೀಸ ಹಾಗೂ ಭಜನೆಗೆ ಅವಕಾಶ ನೀಡಬೇಕು. ಇವೆರಡೂ ಆಗಲಿಲ್ಲ ಎಂದರೆ ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆ ಎದುರು ಉಗ್ರ ಪ್ರತಿಭಟನೆ ಮಾಡುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ.

Copyright © All rights reserved Newsnap | Newsever by AF themes.
error: Content is protected !!