January 12, 2025

Newsnap Kannada

The World at your finger tips!

niraj

ಜಾವೆಲಿನ್ ಥ್ರೋ ಪಂದ್ಯ: ಭಾರತದ ನೀರಜ್ ಚೋಪ್ರಾ ಫೈನಲ್​ಗೆ

Spread the love

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಬುಧವಾರ ಬೆಳಿಗ್ಗೆ ನಡೆದ ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತದ ನೀರಜ್ ಚೋಪ್ರಾ ಅವರು ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಗ್ರೂಪ್ ಎ ಯಲ್ಲಿ ಸ್ಫರ್ದಿಸಿದ ನೀರಜ್ ಮೊದಲ ಪ್ರಯತ್ನದಲ್ಲೇ 86.65 ಮೀಟರ್ ದೂರದ ಸಾಧನೆ ಮಾಡಿದರು.

ಈ ವಿಭಾಗದಲ್ಲಿ ವಿಶ್ವದ ನಂಬರ್ ಒನ್ ಜರ್ಮನಿಯ ಜೊಹಾನ್ಸ್ ವೆಟರ್ 82.04 ಮೀಟರ್ ಸಾಧನೆ ಮಾಡಿದರು.

ಆದರೆ, ನೀರಜ್ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಪ್ರದರ್ಶನ ತೋರಿ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ.

ಫೈನಲ್ ಪಂದ್ಯ ಆಗಸ್ಟ್ 7 ರಂದು ನಡೆಯಲಿದ್ದು ಭಾರತ ಮತ್ತೊಂದು ಪದಕದ ನಿರೀಕ್ಷೆಯಲ್ಲಿದೆ.

ನೀರಜ್ ಈ ಹಿಂದೆ ಗೋಲ್ಡ್ಕೋಸ್ಟ್​​ನಲ್ಲಿ ನಡೆದಿದ್ದ ಕಾಮನ್ವೆಲ್ತ್ ಮತ್ತು ಜಕಾರ್ತದಲ್ಲಿ ಜರುಗಿದ್ದ ಏಷ್ಯನ್ ಕ್ರೀಡಾಕೂಟಗಳಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದರು.

Copyright © All rights reserved Newsnap | Newsever by AF themes.
error: Content is protected !!