ಜಯಲಲಿತಾ ಅವರ ಕರ್ನಾಟಕದ ಖಜಾನೆಯಲ್ಲಿ ಈಗಲೂ ಸೀರೆ, ಚಪ್ಪಲಿ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳಿವೆ. ಜಯಲಲಿತಾ ಅವರ ಸೀರೆ, ಚಪ್ಪಲಿ, ಶಾಲು ಹರಾಜಿಗೆ ಇಡಬೇಕು ಅಂತಾ ಕರ್ನಾಟಕದ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ತಮಿಳುನಾಡಿನ ಮಾಜಿ ಸಿಎಂ ದಿವಂಗತೆ ಜಯಲಲಿತಾ ಮೃತರಾಗಿ ಇಂದಿಗೆ 6 ವರ್ಷ ಆಗಿದ್ದು ಅವರು 1991-96ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಅಂತ ಆರೋಪಿಸಿ ವಕೀಲ ಸುಬ್ರಮಣಿಯಮ್ ಸ್ವಾಮಿ ದೂರು ನೀಡಿದ್ದರು. CBI 1997ರಲ್ಲಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಆಕ್ರಮ ಆಸ್ತಿಯನ್ನು ಜಪ್ತಿ ಮಾಡಲಾಯಿತು. ರಾಷ್ಟ್ರೀಯ ಸಂಪತ್ತು ಅಂತಾ ಘೋಷಣೆ ಮಾಡಿ ಕರ್ನಾಟಕದ ಖಜಾನೆಯಲ್ಲಿ ಇಡಲಾಯಿತು.
26 ವರ್ಷಗಳಿಂದ ಅವರ ವಸ್ತುಗಳು ಖಜಾನೆಯಲ್ಲಿ ಕೊಳೆಯುತ್ತಾ ಇದ್ದು ನಿಷ್ಪ್ರಯೋಜಕ ಆಗುವುದು ಬೇಡ ಹರಾಜಿಗೆ ಇಟ್ಟರೆ ಅಭಿಮಾನಿಗಳು ತೆಗೆದುಕೊಳ್ಳುತ್ತಾರೆ. ಹರಾಜಿಗೆ ಇಡಲು ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವಕೀಲ ನರಸಿಂಹ ಮೂರ್ತಿ ಮನವಿ ಮಾಡಿದ್ದಾರೆ. ಇದನ್ನು ಓದಿ – ನನಗೆ ಮುಸ್ಲಿಮರ ಮತ ಬೇಡ, ಅವರನ್ನು ಕೇಳೋದೆ ಇಲ್ಲ: ಕೆ.ಎಸ್.ಈಶ್ವರಪ್ಪ
ಜಯಲಲಿತಾ ಅವರ ಸೀರೆ, ಚಪ್ಪಲಿ ಎಷ್ಟು ಇತ್ತು?
ವಿಧಾನಸೌಧದ ಖಜಾನೆಯಲ್ಲಿ ಜಯಲಲಿತಾರ 11,344 ಸೀರೆ, 750 ಜೊತೆ ಚಪ್ಪಲಿ ಮತ್ತು ೨೫೦ ಶಾಲುಗಳು 26 ವರ್ಷಗಳಿಂದ ಕೊಳೆಯುತ್ತಿವೆ. ಇದನ್ನು ಹರಾಜಿಗೆ ಇಟ್ಟರೆ ಅವರ ಅಭಿಮಾನಿಗಳು ಒಂದು ಸಾವಿರ ಅಥವಾ ಹತ್ತು ಸಾವಿರ ಕೊಟ್ಟು ಕೊಂಡುಕೊಳ್ಳುತ್ತಾರೆ. ಇದರಿಂದ ಸರ್ಕಾರಕ್ಕೆ ಆದಾಯ ಬರುತ್ತದೆ. ಏಕೆಂದರೆ ಜಯಲಲಿತಾ ಅವರು ಬದುಕಿಲ್ಲ. ಕೇಸ್ ಇದ್ದರೂ ಕೂಡ ಅವರಿಲ್ಲದ ಕಾರಣ ಏನು ಆಗುವುದಿಲ್ಲ. ಅವರ ಸೀರೆ, ಚಪ್ಪಲಿ, ಶಾಲು ಹರಾಜಿಗೆ ಇಟ್ಟರೆ ಪ್ರಯೋಜನಕ್ಕೆ ಬರುತ್ತದೆ. ಹಾಗಾಗಿ ನಿರ್ದೇಶನಕ್ಕೆ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದೇನೆ. ಆದೇಶ ನೀಡಿದರೆ ಅನುಕೂಲ ಆಗುತ್ತದೆ ಎಂದು ವಕೀಲ ನರಸಿಂಹಮೂರ್ತಿ ಹೇಳಿದ್ದಾರೆ.
ಅಕ್ರಮ ಆಸ್ತಿ ಕೇಸ್ ವಿಚಾರಣೆಯನ್ನು ಹೊರ ರಾಜ್ಯದಲ್ಲಿ ಮಾಡಿಸಬೇಕು ಅಂತಾ ದೂರುದಾರರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ಕರ್ನಾಟಕ ರಾಜ್ಯದ ಖಜಾನೆಯಲ್ಲಿ ವಸ್ತುಗಳನ್ನು ಇಟ್ಟು ವಿಚಾರಣೆ ಮಾಡುತ್ತಿದ್ದರು. ವಿಚಾರಣೆ ಹಂತದಲ್ಲಿ ಇರುವಾಗಲೇ ಮೃತರಾದ ಕಾರಣ ವಸ್ತುಗಳನ್ನ ತಮಿಳುನಾಡು ಅಥವಾ ಕರ್ನಾಟಕ ಯಾವ ರಾಜ್ಯದಲ್ಲಾದರೂ ಹರಾಜಿಗೆ ಇಡಲು ಅವಕಾಶ ಮಾಡಿಕೊಡಬೇಕು. ಇದರಿಂದ ಅನುಕೂಲ ಇದೆ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
ಕೃಷಿಹೊಂಡದಲ್ಲಿ ಈಜಲು ಹೋಗಿ ಬೆಂಗಳೂರಿನ ಯುವಕರಿಬ್ಬರು ಜಲ ಸಮಾಧಿ
ಕೃಷಿಹೊಂಡಕ್ಕೆ ಈಜಲು ಹೋಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತೌಟನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನ ಹರೀಶ್(21) ಹಾಗೂ ಶೃತೀಪ್ (30) ಮೃತ ದುರ್ದೈವಿಗಳು.
ರಜೆಯ ಕಾರಣ ತೌಟನಹಳ್ಳಿಯ ಹರೀಶ್ ಸಂಬಂಧಿಕರ ಮನೆಗೆ ಬಂದ ಐವರು ಸ್ನೇಹಿತರು ತೋಟದಲ್ಲಿದ್ದ ಕೃಷಿಹೊಂಡದಲ್ಲಿ ಈಜಲು ಹೋದಾಗ ದುರ್ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮಾರ್ಟಿನ್, ಅಜಿಮ್, ಸ್ಟ್ಯಾಲಿನ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಚನ್ನಪಟ್ಟಣದ ಎಂ.ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮೃತದೇಹಗಳನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ