ಕೋಲಾರ ಶಾಸಕ ಶ್ರೀನಿವಾಸಗೌಡ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತಚಲಾಯಿಸಿದ ನಂತರ ಕೋಲಾರದಲ್ಲಿ ಶಾಸಕ ವಿರುದ್ದ ಜೆಡಿಎಸ್ ಪಕ್ಷದ ಕುಮಾರಸ್ವಾಮಿ ಅಭಿಮಾನಿಗಳು ಜೂನ್ 21 ರಂದು ಕೈಲಾಸ ಸಮಾರಧನೆ ಕಾರ್ಯಕ್ರಮ ಹಮ್ಮಿಕೊಂಡು ಆಕ್ರೋಷ ವ್ಯಕ್ತ ಪಡಿಸಿದ್ದಾರೆ
ಜೆಡಿಎಸ್ ಶಾಸಕ ಕೆ.ಶ್ರೀನಿವಾಸ ಗೌಡ ಮನೆ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಮತ ನೀಡುವಂತೆ ಸಾಕಷ್ಟು ಮನವೊಲಿಸುವ ಕೆಲಸ ಮಾಡಲಾಯಿತಾದರೂ ಅಂತಿಮವಾಗಿ ಶ್ರೀನಿವಾಸ ಗೌಡರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ಹಾಗೂ 2ನೇ ಪ್ರಾಶಸ್ತ್ಯದ ಮತವನ್ನು ಹಾಕಿದ್ದಾರೆ.
ಈ ನಿರ್ಧಾರ ಖಂಡಿಸಿದ ಕೋಲಾರ ಜೆಡಿಎಸ್ ಕಾರ್ಯಕರ್ತರು ವಿಧಾನಪರಿಷತ್ ಸದಸ್ಯ ಗೋವಿಂದರಾಜು ನೇತೃತ್ವದಲ್ಲಿ ಶ್ರೀನಿವಾಸಗೌಡರ ಮನೆ ಎದುರು ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ, ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದಿಂದ ಕೆರಳಿದ ಕೋಲಾರ ಕ್ಷೇತ್ರದ ಮತದಾರರು, ಬದುಕಿರುವಾಗಲೇ ಶಾಸಕರ ತಿಥಿ ಮಾಡುವ ನಿರ್ಧಾರ ಮಾಡಿದ್ದಾರೆ.
ಇದನ್ನು ಓದಿ – ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಹಿಂಸಾಚಾರ; ಗಾಯಗೊಂಡಿದ್ದ ಇಬ್ಬರು ಇಂದು ಸಾವು
ಈ ಕುರಿತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕುಮಾರ ಸೇನಾ ಪಡೆ ಜೂನ್ 21ರಂದು ಕೈಲಾಸ ಸಮಾರಾಧನೆಗೆ ನಿರ್ಧಾರ ಮಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು