NDA ಜೊತೆ JDS ಮೈತ್ರಿ ಅಧಿಕೃತ : ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಣೆ

Team Newsnap
1 Min Read

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ನೇತೃತ್ವದ NDA ಒಕ್ಕೂಟಕ್ಕೆ ಜೆಡಿಎಸ್‌ JDS ಅಧಿಕೃತವಾಗಿ ಸೇರ್ಪಡೆಯಾಗಿದೆ.

2024ರ ಲೋಕಸಭಾ ಚುನಾವಣೆಗೆ ಜೆಡಿಎಸ್‌ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್‌ ಪಕ್ಷಕ್ಕೆ ಸ್ವಾಗತ ಕೋರಿದ್ದಾರೆ.

ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿಯಾದ ನಂತರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ.

ಜೆಡಿಎಸ್‌ 6 ಕ್ಷೇತ್ರಗಳನ್ನು ಕೇಳಿದ್ದು, ಬಿಜೆಪಿ 4 ಕ್ಷೇತ್ರಗಳನ್ನು ನೀಡಲು ಸಿದ್ಧವಿದೆ ಎನ್ನಲಾಗುತ್ತಿದೆ. ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರದ ಜೊತೆ ಮೈಸೂರಿನ ಮೇಲೂ ಜೆಡಿಎಸ್‌ ಕಣ್ಣಿಟ್ಟಿದೆ.

ಎಕ್ಸ್‌ (ಟ್ವಿಟರ್) ನಲ್ಲಿ ಜೆಪಿ ನಡ್ಡಾ ಈ ಬಗ್ಗೆ ಪೋಸ್ಟ್ ಮಾಡಿದ್ದು, ಜೆಡಿಎಸ್ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ಸಂತಸ ತಂದಿದೆ. ನಾವು ಅವರನ್ನು ಹೃದಯಪೂರ್ವಕವಾಗಿ ಎನ್‌ಡಿಎಗೆ ಸ್ವಾಗತಿಸುತ್ತೇವೆ. ಇದು ಎನ್‌ಡಿಎಯನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ‘ಹೊಸ ಭಾರತ, ಬಲಿಷ್ಠ ಭಾರತ’ಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಯನ್ನು ಇನ್ನಷ್ಟು ಬಲಪಡಿಸುತ್ತದೆ” ಎಂದು ನಡ್ಡಾ ಬರೆದಿದ್ದಾರೆ.

Share This Article
Leave a comment