ಜೆಡಿಎಸ್ – ಬಿಜೆಪಿ ಮೈತ್ರಿ : ಇನ್ನೂ ಆರಂಭಿಕ ಹಂತ – ಎಚ್ ಡಿ ಕೆ

Team Newsnap
1 Min Read

ಬೆಂಗಳೂರು : ಜೆಡಿಎಸ್ – ಬಿಜೆಪಿ ಮೈತ್ರಿಯ ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ನಂಗೆ ಗೊತ್ತಿರುವ ಹಾಗೆ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಶನಿವಾರ ತಿಳಿಸಿದರು.

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ.

ಯಡಿಯೂರಪ್ಪ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006 ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದೆ ಎಂದಿದ್ದಾರೆ. ಮುಂದಿನ ವಾರದಲ್ಲಿ ಬರಗಾಲ ಘೋಷಣೆ- ಸಿ ಎಂ ಸಿದ್ದು

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರ್ಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ ಈ ಸರ್ಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರ್ಕಾರದ ವಿರುದ್ಧ ಸಂಘಟಿತವಾಗಿ ಹೋರಾಟ ನಡೆಸಬೇಕಿದೆ

Share This Article
Leave a comment