ರಾಜ್ಯ ವಿಧಾನ ಸಭೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಭದ್ರಾವತಿ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಭದ್ರಾವತಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿರುವ ಅಪ್ಪಾಜಿಗೌಡರ ಪುತ್ಥಳಿ ಅನಾವರಣದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ ಭದ್ರಾವತಿ ಕ್ಷೇತ್ರದ ಜನರ ಹಾಗೂ ಅಪ್ಪಾಜಿಗೌಡರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ಯಾರೆಂದು ನಿರ್ಧರಿಸಿದ್ದಾರೆ. ಹಾಗೆಯೇ ಸಹೋದರಿ ಶಾರದಾ ಅಪ್ಪಾಜಿಗೌಡರನ್ನು ಮುಂದಿನ ಅಭ್ಯರ್ಥಿ ಮಾಡುತ್ತೇವೆ ಎಂದು ಪ್ರಕಟಿಸಿದರು.
ಸೆ. ತಿಂಗಳ 27 ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ ಮಾಡುತ್ತಿದ್ದೇವೆ. 140 ಅಭ್ಯರ್ಥಿಗಳ ಮೊದಲ ಹಂತದ ಕಾರ್ಯಾಗಾರವನ್ನು ಮಾಡುತ್ತಿದ್ದೇವೆ. ಅಲ್ಲಿ ಎಲ್ಲಾ ವಿಷಯವನ್ನು ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ