ಕಾಂಗ್ರೆಸ್ ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿ ಜೆಡಿಎಸ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಕಳೆದ ರಾತ್ರಿ ಜೆಡಿಎಸ್ ನಾಯಕ ಹೆಚ್’ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಅನಿಲ್ ಲಾಡ್ ಅವರು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅನಿಲ್ ಲಾಡ್ ಅವರು ಪಕ್ಷಕ್ಕೇ ಸೇರ್ಪಡೆಗೊಳ್ಳುತ್ತಿದ್ದಂತೆಯೇ ಕಳೆದ ವಾರ ಘೋಷಿಸಲಾಗಿದ್ದ ಬಳ್ಳಾರಿ ಜೆಡಿಎಸ್ ಅಭ್ಯರ್ಥಿಯನ್ನು ಪಕ್ಷವು ಏಕಾಏಕಿ ಬದಲಾಯಿಸಿದೆ.
ಜೆಡಿಎಸ್ ಗೆ ಸೇರ್ಪಡೆಯಾದ ಬೆನ್ನಲ್ಲೇ ಅನಿಲ್ ಲಾಡ್ ಅವರಿಗೆ ಟಿಕೆಟ್ ನೀಡಿದೆ. ಅನಿಲ್ ಲಾಡ್ ಅವರೇ ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿದೆ.
ಕಳೆದ ವಾರ ಪ್ರಕಟವಾಗಿದ್ದ ಜೆಡಿಎಸ್ ಪಟ್ಟಿಯಲ್ಲಿ ಮುನ್ನಾಭಾಯಿ ಎನ್ನುವವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು