January 8, 2025

Newsnap Kannada

The World at your finger tips!

election , politics , JDS

ವಿಧಾನ ಪರಿಷತ್ ಚುನಾವಣೆ : 7 ಕ್ಷೇತ್ರಗಳಲ್ಲಿ ಶೀಘ್ರವೇ ಜೆಡಿಎಸ್ ಅಭ್ಯರ್ಥಿ ಪ್ರಕಟ – ಹೆಚ್‌ಡಿಕೆ

Spread the love

ವಿಧಾನ ಪರಿಷತ್‌ ಚುನಾವಣೆಗಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ಜನತಾ ಪರ್ವ 1.೦ ರ ಎರಡನೇ ಹಂತದ ಸಂಘಟನಾ ಕಾರ್ಯಾಗಾರ ಜನತಾ ಸಂಗಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಚುನಾವಣೆ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಎರಡು ಕ್ಷೇತ್ರಗಳು ಇವೆ. ಮೈಸೂರಿನ ಒಂದು ಕ್ಷೇತ್ರ ಹಾಗೂ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ತುಮಕೂರಿನ ನಾಯಕರ ಸಭೆ ಕೂಡ ಮಂಗಳವಾರ ಮಾಡಿದ್ದೇನೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಇಟ್ಟುಕೊಂಡಿದ್ದೇನೆ. ಅಂತಿಮ ವರದಿ, ಪರಿಶೀಲನೆ ಮುಗಿದ ಮೇಲೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉಳಿದ ಜಿಲ್ಲೆಗಳ ಸಭೆಯನ್ನೂ ಆದಷ್ಟು ಬೇಗ ಮಾಡಲಾಗುವುದು ಎಂದು ತಿಳಿಸಿದರು.

ಹಾಸನದ ಕುರಿತಂತೆ ಅಂತಿಮವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ. ರಾಯಚೂರು, ವಿಜಯಪುರ, ಕಲಬುರಗಿಯಲ್ಲೂ ನಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಬೇಕು ಎಂಬ ಮನವಿ ಇದೆ. ಪರಿಶೀಲನೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!