ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಅಭ್ಯರ್ಥಿ ಹಠಾತ್ ನಿಧನ

Team Newsnap
1 Min Read
JDS candidate who participated in Pancharatna yatra died suddenly ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಅಭ್ಯರ್ಥಿ ಹಠಾತ್ ನಿಧನ

ಸಿಂದಗಿ ಮತಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಸೋಮಜಾಳ (54)ಕಳೆದ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾದರು.

ನಾಗಠಾಣ ಮತಕ್ಷೇತ್ರದಲ್ಲಿ ನಡೆದ ಪಕ್ಷದ ಪಂಚರತ್ನ ಕಾರ್ಯಕ್ರಮದಲ್ಲಿ ಹೆಚ್‍ಡಿಕೆಯೊಂದಿಗೆ ಶಿವಾನಂದ್ ಭಾಗಿಯಾಗಿದ್ದರು.ಕನ್ನನಾಯಕನಹಳ್ಳಿಯಲ್ಲಿ ಚಿರತೆ ದಾಳಿಗೆ 3ನೇ ಬಲಿ

ನಂತರ ಸಂಜೆ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು. ರಾತ್ರಿ 9 ರ ವೇಳೆಗೆ ಅಸ್ವಸ್ಥಗೊಂಡ ಶಿವಾನಂದ್ ಪಾಟೀಲ್ ಸೋಮಜಾಳ, ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ತೀವ್ರ ಹೃದಯಾಘಾತದಿಂದ ಶಿವಾನಂದ್ ಕೊನೆಯುಸಿರೆಳೆದರು.

ಶಿವಾನಂದ್ 16 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾ ಗಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸೋಮಜಾಳ ಗ್ರಾಮದ ಮೂಲದವರಾಗಿರುವ ಇವರು, ಪತ್ನಿ ವಿಶಾಲಾಕ್ಷಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Share This Article
Leave a comment