ರಾಜ್ಯದ ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭಾನುವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಪ್ರಕಟಿಸಿದರು.
ಇತ್ತೀಚೆಗೆ ರಾಯಚೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಉಪ ಚುನಾವಣೆ ಎದುರಿಸಲು ನಮ್ಮ ಬಳಿ ಹಣ ಇಲ್ಲ. ಹಾಗಾಗಿ ಬೆಳಗಾವಿ ಲೋಕಸಭಾ, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳ ಬೈ ಎಲೆಕ್ಷನ್ಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ ಎಂದಿದ್ದರು.
ದೇವೇಗೌಡರು ಈ ಹೇಳಿಕೆ ಕೊಟ್ಟು ನಾಲ್ಕು ದಿನ ನಂತರ ಇದೀಗ ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಪಕ್ಷ ಸಂಘಟನೆ ಸಮಾವೇಶ ಮತ್ತು ಗ್ರಾಪಂ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರು ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಸಿಂದಗಿ, ಬಸವ ಕಲ್ಯಾಣ, ಮಸ್ಕಿ ಕ್ಷೇತ್ರಗಳ ಬೈ ಎಲೆಕ್ಷನ್ಗೆ ಜೆಡಿಎಸ್ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲ್ಲ ಎಂದಿದ್ದರು.
ಆದರೆ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಈ ಮೂರು ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕ್ತೇವೆ. ಈ ಕುರಿತು ದೇವೇಗೌಡರ ಅನುಮತಿ ಪಡೆದುಕೊಂಡೇ ಮುಂದುವರಿಯ ಲಾಗುತ್ತಿದೆ ಎಂದರು.
ಬಿಟ್ಟು ಹೋದವರಿಗೆ ನಮ್ಮ ಬಗ್ಗೆ ಚಿಂತೆ ಏಕೆ?
ಜೆಡಿಎಸ್ ಬಿಟ್ಟು ಹೋದವರಿಗೆ ನಮ್ಮ ಪಕ್ಷದ ಬಗ್ಗೆ ಚಿಂತೆ ಏಕೆ? ಬೈ ಎಲೆಕ್ಷನ್ಗೆ ಅಭ್ಯರ್ಥಿಯನ್ನು ಕಣಕ್ಕಿಳಿಸೋದಿಲ್ಲ ಎಂದು ದೇವೇಗೌಡರು ಹೇಳಿದ್ರೆ ಅವರು ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್ಡಿಕೆ ಕಿಡಿಕಾರಿದರು.
ದೇವೇಗೌಡರು ಸಾಲ ಮಾಡಿ ಜೆಡಿಎಸ್ ಕಟ್ಟಿದ್ದಾರೆ. ಅವರ ಮಾರ್ಗದರ್ಶನವನ್ನು ನಾವು ಮುಂದುವರಿಸುತ್ತಲೇ ಪಕ್ಷ ಕಟ್ಟುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು